Friday, September 20, 2024

ಕಾಂಗ್ರೆಸ್​ಗೆ ಬಿಗ್ ಶಾಕ್.. ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಜಾರ್ಖಂಡ್‌ : ಲೋಕಸಭಾ ಚುನಾವಣೆ ಮುನ್ನವೇ ಜಾರ್ಖಂಡ್‌ನ ಸಿಂಗ್‌ಭೂಮ್ ಕ್ಷೇತ್ರದ ಕಾಂಗ್ರೆಸ್ ಸಂಸದೆ, ಮಾಜಿ ಮುಖ್ಯಮಂತ್ರಿ ಮಧು ಕೋಡಾ ಪತ್ನಿ ಗೀತಾ ಕೋಡಾ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಗೀತಾ ಕೋಡಾ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು, ಇಂದು ನಾನು ಬಿಜೆಪಿ ಸೇರಿದ್ದೇನೆ. ತುಷ್ಟೀಕರಣ ರಾಜಕಾರಣ ಮಾಡುವ ಮೂಲಕ ಕಾಂಗ್ರೆಸ್ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಕ್ಷವು ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುತ್ತದೆ ಎಂದು ಹೇಳುತ್ತದೆ. ಆದರೆ, ಅದು ತನ್ನ ಕುಟುಂಬವನ್ನು ಮಾತ್ರ ಕರೆದುಕೊಂಡು ಹೋಗುತ್ತದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾದ ಏಕೈಕ ಸಂಸದೆ

ಗೀತಾ ಕೋಡಾ ಅವರು ಕಾಂಗ್ರೆಸ್‌ನಿಂದ ಆಯ್ಕೆಯಾದ ಏಕೈಕ ಸಂಸದರಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಜಾರ್ಖಂಡ್‌ನ 14 ಸ್ಥಾನಗಳ ಪೈಕಿ ಬಿಜೆಪಿ ಹಾಗೂ ಎಜೆಎಸ್‌ಯು ಮೈತ್ರಿಕೂಟ 12ರಲ್ಲಿ ಗೆಲುವು ಸಾಧಿಸಿತ್ತು.

RELATED ARTICLES

Related Articles

TRENDING ARTICLES