Sunday, September 8, 2024

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ : ಸತತ 17ನೇ ಟೆಸ್ಟ್ ಸರಣಿ ಗೆದ್ದ ಭಾರತ

ಬೆಂಗಳೂರು : ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 3-1 ಅಂತರದಿಂದ ಭಾರತ ಸರಣಿಯನ್ನು ವಶಪಡಿಸಿಕೊಂಡಿದೆ.

192 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ, 5 ವಿಕೆಟ್​ಗಳ ಜಯ ದಾಖಲಿಸಿತು. ಪ್ರಥಮ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್​ 353 ರನ್​ ಗಳಿಸಿದ್ದರೆ, ಭಾರತ 307 ರನ್​ಗಳಿಗೆ ಆಲೌಟ್​ ಆಗಿತ್ತು. ಎರಡನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್​ 145 ರನ್​ಗಳಿಗೆ ಆಲೌಟ್​ ಆಗಿತ್ತು. ಈ ಮೂಲಕ ಭಾರತದ ಗೆಲುವಿಗೆ 192 ರನ್​ಗಳ ಗುರಿಯನ್ನು ನೀಡಿತ್ತು.

ಇಂಗ್ಲೆಂಡ್​ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಭಾರತ 3-1 ಮುನ್ನಡೆ ಸಾಧಿಸಿದ್ದು, ಇನ್ನೂ ಒಂದು ಪಂದ್ಯ ಇರುವಾಗಲೇ ಸರಣಿ ವಶಪಡಿಸಿಕೊಂಡಿದೆ. ಇದರೊಂದಿಗೆ ತವರು ನೆಲದಲ್ಲಿ ಭಾರತ ಸತತ 17ನೇ ಟೆಸ್ಟ್​​ ಸರಣಿ ಜಯಿಸಿದೆ.

2012ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತವರಿನಲ್ಲಿ ಇಂಗ್ಲೆಂಡ್​ ವಿರುದ್ಧ 1-2 ಅಂತರದಲ್ಲಿ ಸರಣಿ ಸೋತಿತ್ತು. ಇದಾದ ನಂತರ ಯಾವುದೇ ಸರಣಿ ಸೋತಿಲ್ಲ. ಆಸ್ಟ್ರೇಲಿಯಾ, ಶ್ರೀಲಂಕಾ, ನ್ಯೂಜಿಲೆಂಡ್, ಇಂಗ್ಲೆಂಡ್, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ವೆಸ್ಟ್​ ಇಂಡೀಸ್​, ಅಫ್ಘಾನಿಸ್ತಾನ ವಿರುದ್ಧ ಭಾರತ ಸರಣಿ ಗೆದ್ದಿದೆ.

RELATED ARTICLES

Related Articles

TRENDING ARTICLES