Friday, May 17, 2024

ICUನಲ್ಲಿದ್ದ 24 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ

ಜೈಪುರ: ಐಸಿಯುನಲ್ಲಿದ್ದ 24 ವರ್ಷದ ಮಹಿಳೆ ಮೇಲೆ ನರ್ಸಿಂಗ್ ಸಹಾಯಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

ಹೌದು,ಶ್ವಾಸಕೋಶದ ಸೋಂಕಿನಿಂದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.ಈಕೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆರೋಪಿ ಚಿರಾಗ್ ಯಾದವ್ ಎಂಬಾತ ಮುಂಜಾನೆ 4 ಗಂಟೆ ಸುಮಾರಿಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಮಹಿಳೆಗೆ ಈತನೇ ಚುಚ್ಚುಮದ್ದು ನೀಡಿದ್ದು, ಆಕೆ ಪ್ರಜ್ಞಾಹೀನಳಾಗಿದ್ದಳು. ಪತಿ ಮೊಬೈಲ್‌ಗೆ ಕರೆ ಮಾಡಿದ ನಂತರ ಮಹಿಳೆಗೆ ಪ್ರಜ್ಞೆ ಬಂದಿದೆ. ಬಳಿಕ ಆಕೆ ಘಟನೆ ಬಗ್ಗೆ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES