Sunday, May 12, 2024

ವಿಕೃತ ಕಾಮಿ ಉಮೇಶ್​ ರೆಡ್ಡಿಗೆ ಪೆರೋಲ್ ನೀಡಲು ನಿರಾಕರಿಸಿದ ಕೋರ್ಟ್​

ಬೆಂಗಳೂರು: ವಿಕೃತ ಕಾಮಿ ಖ್ಯಾತಿಯ ಅತ್ಯಾಚಾರ ಆರೋಪಿ ಉಮೇಶ್​ ರೆಡ್ಡಿಗೆ ಪೆರೋಲ್​ ನೀಡಲು ರಾಜ್ಯ ಹೈಕೋರ್ಟ್​ ನಿರಾಕರಿಸಿದೆ.

ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್‌ ನೀಡುವಂತೆ ಕೋರಿ ಉಮೇಶ್​ ರೆಡ್ಡಿ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದ, ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೆರೋಲ್ ನೀಡಲು ನಿರಾಕರಿಸಿದೆ.

ಮನೆ ದುರಸ್ತಿಯಲ್ಲಿದ್ದು ಅದನ್ನು ಸರಿಪಡಿಸುವುದಕ್ಕಾಗಿ ಪೆರೋಲ್ ನೀಡಬೇಕು ಎಂದು ಅರ್ಜಿದಾರರ ಮತ್ತೊಂದು ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಇಬ್ಬರು ಸಹೋದರರಿದ್ದು, ತಾಯಿಯನ್ನು ನೋಡಿಕೊಳ್ಳುತ್ತಾರೆ. ಮನೆ ದುರಸ್ತಿಯನ್ನೂ ಮಾಡುತ್ತಾರೆ. ಅರ್ಜಿದಾರರ ನೀಡಿರುವ ಎರಡೂ ಕಾರಣಗಳಲ್ಲಿ ಸಮರ್ಥವಾಗಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ಕನ್ನಡ ಕಡ್ಡಾಯಕ್ಕೆ ರಾಜ್ಯಪಾಲರ ಅಂಕಿತ: ಮಾ.1ರ ಬಳಿಕ ಮತ್ತೆ ಹೋರಾಟದ ಎಚ್ಚರಿಕೆ ನೀಡಿದ ಕರವೇ

1998 ರ ಫೆ. 28 ರಂದು ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿಉಮೇಶ್‌ ರೆಡ್ಡಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಸುಪ್ರೀಂಕೋರ್ಟ್‌ ಮಾರ್ಪಾಡು ಮಾಡಿ ಆದೇಶಿಸಿತ್ತು. ಅಲ್ಲದೆ, ನ್ಯಾಯಾಲಯಕ್ಕೆ ಪೆರೋಲ್‌ ಸೇರಿದಂತೆ ಯಾವುದೇ ರೀತಿಯ ಅರ್ಜಿ ಸಲ್ಲಿಸಬೇಕು ಎಂದಾದರೆ ಕನಿಷ್ಟ 30 ವರ್ಷಗಳ ಕಾಲ ಶಿಕ್ಷೆ ಅನುಭವಿಸಬೇಕು ಎಂದು ಸುಪ್ರೀಂಕೋರ್ಟ್‌ ತಿಳಿಸಿತ್ತು.

ಆಸ್ಪಾಕ್ ವಿರುದ್ಧದ ರಾಜಸ್ಥಾನ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯಪೀಠ, ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರಿಗೆ ಪೆರೋಲ್ ನೀಡಬೇಕಾದಲ್ಲಿ ಸಾರ್ವಜನಿಕ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಬೇಕು. ಆದ್ದರಿಂದ ಅರ್ಜಿದಾರರಿಗೆ ಪೆರೋಲ್ ನೀಡಿದಲ್ಲಿ ಮತ್ತೆ ಅಪರಾಧ ಪ್ರವೃತ್ತಿಯನ್ನು ಹೊಂದಿರಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡಬಹುದು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಜೈಲು ಅಧಿಕಾರಿಗಳ ದಾಖಲೆಗಳನ್ನು ಪರಿಶೀಲಿಸಿರುವ ಸುಪ್ರೀಂಕೋರ್ಟ್ ಅರ್ಜಿದಾರರು ಜೈಲಿನಿಂದ ಹೊರ ಬಂದಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದೆ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

RELATED ARTICLES

Related Articles

TRENDING ARTICLES