Thursday, May 9, 2024

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ ಭಾರೀ ಅನಾಹುತ ತಪ್ಪಿದೆ.

ಹೌದು, ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದ್ದು,ಇನ್ನೂ ವಸತಿ ಶಾಲೆ ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿದೆ.

ಈ ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ . ವಿದ್ಯಾರ್ಥಿಗೆ  ಮೂಗು, ಕೆನ್ನೆ, ಕಿವಿಗೆ ತಾಕಿದ್ದು ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ.

ಸಾಗರ್, ಸಮರ್ಥ, ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಸುಟ್ಟು ಗಾಯಗಳಾಗಿವೆ. ಇನ್ನು ಘಟನೆ ನಡೆದ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ ಈ ಅವಘಡ ಸಂಭವಿಸಿದೆ. ವಾರ್ಡನ್ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಅಗ್ನಿ ಅವಘಡದಿಂದಾಗಿ ಕೋಣೆಯ ಗೋಡೆಗೆ ಆವರಿಸಿರುವ ಹೊಗೆಯನ್ನು ಸ್ವಚ್ಛ ಮಾಡುವ ಕಾರ್ಯ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.

RELATED ARTICLES

Related Articles

TRENDING ARTICLES