Monday, May 20, 2024

ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ.? : ಆರ್​. ಅಶೋಕ್​ ಕಿಡಿ

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ.? ಡಿಸಿಎಂ ಡಿಕೆ ಶಿವಕುಮಾರ್​ನವರೇ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ಕಿಡಿಕಾರಿದ್ದಾರೆ.  

ಈ ಕುರಿತು ಟ್ವೀಟ್​ ಮಾಡಿರುವ ಆರ್, ಅಶೋಕ್​ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು ಈ ಘಟನೆ ಕಾಂಗ್ರೆಸ್​ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ನೀವು ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ ಸಿಎಂ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ್ದಾರೆ.

ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ? ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ ಡಿ.ಕೆ ಶಿವಕುಮಾರ್​ ಅವರೇ..? ಎಂದು ಪ್ರಶ್ನೆ ಮಾಡಿದ್ಧಾರೆ. 

RELATED ARTICLES

Related Articles

TRENDING ARTICLES