Sunday, May 19, 2024

ಮೊಹಮ್ಮದ್‌ ಶಮಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಕಳೆದ ವಿಶ್ವಕಪ್‌ ಟೂರ್ನಿಯಲ್ಲಿ ದೇಶದ ಗಮನ ಸೆಳೆದಿದ್ದ ಮೊಹಮ್ಮದ್‌ ಶಮಿ ಅವರು ಲಂಡನ್‌ನಲ್ಲಿ ಎಡಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕುರಿತು ಮೊಹಮ್ಮದ್‌ ಶಮಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅಭಿಮಾನಿಗಳಿಗೆ ಸಂದೇಶವನ್ನೂ ರವಾನಿಸಿದ್ದಾರೆ.

ನಾನು ಯಶಸ್ವಿಯಾಗಿ ಪಾದದ ಸ್ನಾಯು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ ಎಂದು ಫೋಟೊಗಳ ಸಮೇತ ಮೊಹಮ್ಮದ್‌ ಶಮಿ ಪೋಸ್ಟ್‌ ಮಾಡಿದ್ದಾರೆ. ಇವರ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ಶೀಘ್ರವೇ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ.

ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ತಮ್ಮ ಮೊನಚಾದ ಬೌಲಿಂಗ್​ ದಾಳಿಯಿಂದ ತಂಡಕ್ಕೆ ಹಲವು ಗೆಲುವು ತಂದುಕೊಟ್ಟಿದ್ದರು. ಆರಂಭಿಕ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದಿದ್ದರೂ, ಆ ಬಳಿಕ ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ ಎನಿಸಿಕೊಂಡಿದ್ದರು. ವಿಶ್ವಕಪ್​ ಬಳಿಕ ಶಮಿ ಗಾಯದ ಸಮಸ್ಯೆಯಿಂದ ಭಾರತ ಪರ ಆಡಿಲ್ಲ.ಇದೀಗ ಪಾದದ ಶಸ್ರ್ತಚಿಕಿತ್ಸೆಗೆ ಒಳಗಾಗಿರುವ ಶಮಿಗೆ ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ ತಂಡಕ್ಕೆ ಮರಳುವಂತೆ ಅಭಿಮಾನಿಗಳು ಹಾರೈಸಿದ್ದಾರೆ.

RELATED ARTICLES

Related Articles

TRENDING ARTICLES