Friday, September 20, 2024

ರಾಜ್ಯಸಭೆ ಚುನಾವಣೆ ಫಲಿತಾಂಶ : ಕರ್ನಾಟಕದ 4 ಸ್ಥಾನಗಳಲ್ಲಿ ಕೈಗೆ 3, ಕಮಲಕ್ಕೆ 1 ಗೆಲುವು 

ಬೆಂಗಳೂರು: ಇಂದು ನಡೆದ  ರಾಜ್ಯಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ.

ಹೌದು, ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಸೋಲು ಕಂಡಿದ್ದಾರೆ.

ಇನ್ನು ಚುನಾವಣೆಯಲ್ಲಿ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದರೆ ಮತ್ತೋರ್ವ ಶಾಸಕ ಶಿವರಾಂ ಹೆಬ್ಬಾರ್ ಗೈರಾಗಿದ್ದಾರೆ. ಈ ಮೂಲಕ ನಿರೀಕ್ಷೆಯಂತೆ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದೆ.

ಕಾಂಗ್ರೆಸ್​ ಅಭ್ಯರ್ಥಿಗಳು

ಕಾಂಗ್ರೆಸ್​ನ ಅಜಯ್ ಮಾಕೇನ್:47 ಮತಗಳು

ನಾಸೀರ್ ಹುಸೇನ್: 47 ಮತಗಳು

ಜಿ.ಸಿ. ಚಂದ್ರಶೇಖರ್: 45 ಮತಗಳು

ಬಿಜೆಪಿ ಅಭ್ಯರ್ಥಿ 

ನಾರಾಯಣಸಾ ಭಾಂಡಗೆ 47 ಮತಗಳು

ಮೈತ್ರಿ ಅಭ್ಯರ್ಥಿ

ಕುಪೇಂದ್ರ ರೆಡ್ಡಿಗೆ ಜೆಡಿಎಸ್​​ನ 19 ಮತಗಳು ಬಿದ್ದಿದ್ದರೆ, ಮಿತ್ರ ಪಕ್ಷ ಬಿಜೆಪಿಯಿಂದ 16 ಮತಗಳು ಮಾತ್ರ ಬಿದ್ದಿದ್ದು ಚುನಾವಣೆಯಲ್ಲಿ ಸೋತಿದ್ದಾರೆ.

 

 

 

 

RELATED ARTICLES

Related Articles

TRENDING ARTICLES