Friday, September 20, 2024

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಡಾಲಿ ಧನಂಜಯ ನೇಮಕ

ಬೆಂಗಳೂರು: 2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಲಿರುವ ’15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯನ್ನಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಹೌದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸಲಾಗಿತ್ತದೆ.

ಅದರಂತೆ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಉದ್ದೇಶಿಸಿರುವ ಮೇರೆಗೆ ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರದ ಆದೇಶದಲ್ಲಿ ಈ ಸಂಬಂಧ ಸಂಘಟನಾ ಮತ್ತು ಕೋರ್ ಸಮಿತಿಗಳನ್ನು ರಚಿಸಲಾಗಿತ್ತು.

ಕಳೆದ ಜ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿನ ನಿರ್ಣಯದ ಅನ್ವಯ ಈ ಚಲನಚಿತ್ರೋತ್ಸವವನ್ನು 2024ರ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ.

ಈ ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಫೆ.29 ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗ ಹಾಗೂ ಮಾ.7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಿ ಸರ್ಕಾರದ ಆದೇಶ ಹೊರಡಿಸುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಶಿಫಾರಸು ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ನಟ ಡಾಲಿ ಧನಂಜಯ್ ಅವರನ್ನು ಚಲನಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

RELATED ARTICLES

Related Articles

TRENDING ARTICLES