Saturday, June 1, 2024

ದಿನ ಭವಿಷ್ಯ: ಇಂದು ದ್ವಿಜಪ್ರಿಯ ಸಂಕಷ್ಟ ಚತುರ್ಥಿ, ಈ ರಾಶಿಗೆ ಗಣೇಶನ ವಿಶೇಷ ಕೃಪೆ!

2024 ಫೆಬ್ರವರಿ 28ರ ಬುಧವಾರವಾದ ಇಂದು, ಚಂದ್ರನು ಕನ್ಯಾರಾಶಿಯ ನಂತರ ತುಲಾ ರಾಶಿಗೆ ಚಲಿಸಲಿದ್ದಾನೆ. ಹಾಗೆಯೇ ಇಂದು ದ್ವಿಜಪ್ರಿಯ ಸಂಕಷ್ಟ ಚತುರ್ಥಿ ಉಪವಾಸವನ್ನು ಆಚರಿಸಲಾಗುತ್ತದೆ. ಈ ದಿನ ವೃದ್ಧಿ ಯೋಗ, ಸರ್ವಾರ್ಥ ಸಿದ್ಧಿ ಯೋಗ ಹಾಗೂ ಚಿತ್ರ ನಕ್ಷತ್ರದ ಶುಭ ಸಂಯೋಗ ನಡೆಯುತ್ತಿದೆ. ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು ಎನ್ನುವುದನ್ನು ತಿಳಿದುಕೊಳ್ಳಿ.

ಮೇಷ: ಅನಿರೀಕ್ಷಿತ ಖರ್ಚು ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ, ಹೀಗಾಗಿ ಹಾಸಿಗೆ ಇದ್ದಷ್ಟು ಕಾಲು ಚಾಚಿ. ಸ್ನೇಹಿತರ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವಿರಿ. ಸಹದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರ ಭಾವ ಮೂಡಲಿದೆ.

ವೃಷಭ: ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆದಷ್ಟು ದೈಹಿಕ ಹಾಗೂ ಮಾನಸಿಕ ದೃಢತೆಗಾಗಿ ಯೋಗ ಹಾಗೂ ಧ್ಯಾನ ಮಾಡುವುದು ಉತ್ತಮ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮನೆಯಲ್ಲಿ ಅಪಸ್ವರಗಳು ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಂದಿಗೆ ಸಂಬಂಧವು ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿ ಇರಲಿದೆ. ಆರ್ಥಿಕವಾಗಿ ಸಭಲತೆ. ಕೌಟುಂಬಿಕವಾಗಿ ಮಿಶ್ರ ಫಲ.

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.

ಇದನ್ನೂ ಓದಿ: ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ.? : ಆರ್​. ಅಶೋಕ್​ ಕಿಡಿ

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.

ತುಲಾ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನವಿದು. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ.

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬ ಸದಸ್ಯರ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಹೆಚ್ಚಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರು ಆರ್ಥಿಕ ಸಹಾಯವನ್ನು ಬೇಡುವರು, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದರಿಂದ ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.

ಕುಂಭ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಖುಷಿ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ಅಗತ್ಯವಿದ್ದರೆ ಸ್ನೇಹಿತರು ನಿಮ್ಮ ನೆರವಿಗೆ ಬರುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಮಾಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.

ಮೀನ: ಹೂಡಿಕೆಯ ಲಾಭಾಂಶ ಸಿಗಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಅದೃಷ್ಟದ ದಿನಗಳು ಇಂದು ಫಲ ನೀಡಲಿದೆ.

RELATED ARTICLES

Related Articles

TRENDING ARTICLES