Saturday, May 11, 2024

Good News : 2 ಸಾವಿರ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ಕಂದಾಯ ಇಲಾಖಾ ಗ್ರಾಮ ಸಹಾಯಕರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. 2 ಸಾವಿರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಗ್ರಾಮ ಸಹಾಯಕರ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರಿ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘದಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆಯೇ ವೇತನ ಹೆಚ್ಚಿಸಲಾಗಿದೆ.

ಗ್ರಾಮ ಸಹಾಯಕರಿಗೆ ‘ಡಿ’ ದರ್ಜೆ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಇಟ್ಟಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರ, ಪ್ರಸ್ತುತ ವೇತನ ಹೆಚ್ಚಳ ಮಾಡಲಾಗಿದೆ. ಆದರೆ, ‘ಡಿ’ ದರ್ಜೆ ಬೇಡಿಕೆಯನ್ನು ಸದ್ಯಕ್ಕೆ ಪಡಿಗಣಿಸಲಾಗದು ಎಂದು ತಿಳಿಸಿದೆ.

ಪಿಎಫ್ ಖಾತೆದಾರರಿಗೆ ಸಿಹಿ ಸುದ್ದಿ

ಪಿಎಫ್ ಖಾತೆದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಬಡ್ಡಿದರ ಶೇ.7.1ಕ್ಕೆ ನಿಗದಿಪಡಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ನೇತ್ರಪ್ರಭಾ ಅಧಿಸೂಚನೆ ಹೊರಡಿಸಿದ್ದಾರೆ.

ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲೆನ ಬಡ್ಡಿ ದರವನ್ನು ಜನವರಿ 1, 2024ರಿಂದ ಮಾರ್ಚ್ 31, 2024ರವರೆಗಿನ ಅವಧಿಗೆ ವಾರ್ಷಿಕ ಶೇ. 7.1ಕ್ಕೆ ನಿಗದಿಪಡಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

RELATED ARTICLES

Related Articles

TRENDING ARTICLES