Thursday, May 9, 2024

ಐಎಎಸ್ ಅಧಿಕಾರಿ, ನಟ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡ ಚಿತ್ರರಂಗದ ನಟ ಕೆ. ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಕೆ. ಶಿವರಾಮ್ ಅವರನ್ನ ಬೆಂಗಳೂರಿನ ಹೆಚ್​ಸಿಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವರಾಂ ಕನ್ನಡದಲ್ಲೇ ಐಎಎಸ್ ಬರೆದು ಪಾಸಾದ ಮೊದಲ ವ್ಯಕ್ತಿ. ಬಾ ನಲ್ಲೇ ಮಧುಚಂದ್ರಕೆ ಸೇರಿದಂತೆ 10ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಸದ್ಯ ಕೆ.ಶಿವರಾಮ್ ಅವರಿಗೆ 71 ವರ್ಷ ವಯಸ್ಸಾಗಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕೆ. ಶಿವರಾಮ್ ಅವರಿಗೆ 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ.ಶಿವರಾಮ್ ಅವರಿಗೆ ಡಯಾಲಿಸಿಸ್ ಕೂಡ ಮಾಡಲಾಗುತ್ತಿತ್ತು. ಇಂದು ಕೆ. ಶಿವರಾಮ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರ ಪರಿಸ್ಥಿತಿ ಬಿಗಡಾಯಿಸಿದೆ ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES