Friday, May 10, 2024

ಮುರುಘಾ ಮಠದ ಶಿವಮೂರ್ತಿಗೆ ಮತ್ತೊಂದು ಸಂಕಷ್ಟ!

ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಶಿವಮೂರ್ತಿ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಮಧ್ಯಂತರ ಆದೇಶ ನೀಡಿದ ಸುಪ್ರೀಂಕೋರ್ಟ್, ಶಿವಮೂರ್ತಿ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಸುಪ್ರೀಂ ಆದೇಶದಿಂದ ಕಳಂಕಿತ ಶಿವಮೂರ್ತಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಬಸ್​ ಚಕ್ರದ ಕೆಳಗೆ ಮಲಗಿ ಕೆಎಸ್​ಆರ್​ಟಿಸಿ ಚಾಲಕ ಹೈಡ್ರಾಮ: ಜನ ಆಕ್ರೋಶ!

ಮಠದಲ್ಲಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ವಿರುದ್ದ ಫೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

RELATED ARTICLES

Related Articles

TRENDING ARTICLES