Friday, May 17, 2024

5ನೇ ಟೆಸ್ಟ್​ಗೆ ಭಾರತ ತಂಡ ಪ್ರಕಟ : ಬುಮ್ರಾ ಇನ್, ಕನ್ನಡಿಗ ರಾಹುಲ್ ಔಟ್

ಬೆಂಗಳೂರು : ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿರುವ ಅಂತಿಮ ಟೆಸ್ಟ್​ ಪಂದ್ಯಕ್ಕೆ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಪುನಾರಗಮನವಾಗಿದ್ದು, ಗಾಯದಿಂದ ಬಳಲುತ್ತಿರುವ ಕೆ.ಎಲ್ ರಾಹುಲ್ ತಂಡದಿಂದ ದೂರ ಉಳಿದಿದ್ದಾರೆ.

ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ಗೆ ವಿಶ್ರಾಂತಿ ಪಡೆದ ಉಪನಾಯಕ ಬುಮ್ರಾ ಮತ್ತೆ ತಂಡ ಸೇರಿದ್ದು, ಬೌಲಿಂಗ್ ವಿಭಾಗ ಮತ್ತಷ್ಟು ಬಲಿಷ್ಠವಾಗಿದೆ. ಇತ್ತ ರನ್ ಗಳಿಸಲು ಹರಸಾಹಸ ಪಡುತ್ತಿರುವ ರಜತ್ ಪಾಟಿದಾರ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇನ್ನೂ ಈ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ಆಡುವ 11ರ ಬಳಗದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ.

5ನೇ ಟೆಸ್ಟ್​ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಭರತ್, ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್​ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್

RELATED ARTICLES

Related Articles

TRENDING ARTICLES