Monday, May 13, 2024

12ನೇ ತರಗತಿ ಪ್ರಶ್ನೆಪತ್ರಿಕೆ ವಾಟ್ಸಾಪ್‌ನಲ್ಲಿ ಲೀಕ್‌: ದೂರು ದಾಖಲು

ಉತ್ತರ ಪ್ರದೇಶ:  12 ನೇ ತರಗತಿಯ ಬೋರ್ಡ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ವಾಟ್ಸಾಪ್ ಗ್ರೂಪಿನಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ದೂರು ದಾಖಲಾಗಿದೆ.

ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಲೀಕ್‌ ಆಗಿವೆ. ಗುರುವಾರ ಸೆಕೆಂಡ್‌ ಶಿಫ್ಟ್‌ ನಲ್ಲಿ ಪರೀಕ್ಷೆಗಳು ಆರಂಭವಾದ ಒಂದು ಗಂಟೆಯ ನಂತರ ಆಗ್ರಾದ ವಾಟ್ಸಾಪ್ ಗುಂಪಿನಲ್ಲಿ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಶ್ನೆ ಪತ್ರಿಕೆಗಳನ್ನು ಕಾಲೇಜು ಪ್ರಾಂಶುಪಾಲರೊಬ್ಬರ ಮಗ “ಆಲ್ ಪ್ರಿನ್ಸಿಪಲ್ಸ್ ಆಗ್ರಾ” ಎಂಬ ವಾಟ್ಸಾಪ್ ಗುಂಪಿನಲ್ಲಿ ಶೇರ್‌ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: LPG Gas Price:ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆ

ಪ್ರಶ್ನೆಪತ್ರಿಕೆ ಸೋರಿ ಸಂಬಂಧ ಆಗ್ರಾ ಶಾಲೆಗಳ ಜಿಲ್ಲಾ ನಿರೀಕ್ಷಕ ದಿನೇಶ್‌ ಕುಮಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಜೊತೆಗೆ ಫತೇಪುರ್‌ ಸಿಕ್ರಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

RELATED ARTICLES

Related Articles

TRENDING ARTICLES