Monday, May 20, 2024

ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ

ದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಎಡ ಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಎರಡೂ ಕಡೆಯವರು ದೂರು ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: 12ನೇ ತರಗತಿ ಪ್ರಶ್ನೆಪತ್ರಿಕೆ ವಾಟ್ಸಾಪ್‌ನಲ್ಲಿ ಲೀಕ್‌: ದೂರು ದಾಖಲು

ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಎಬಿವಿಪಿ ಮತ್ತು ಎಡ ಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ವಾಗ್ವಾದ ನಡೆಸಿದೆ. ಬಳಿಕ ಇದು ಹಿಂಸಾಚಾರಕ್ಕೆ ತಿರುಗಿದೆ. ಘರ್ಷಣೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸುತ್ತಿರುವ ದೃಶ್ಯ ಸೆರೆಯಾಗಿದೆ. ಮತ್ತೊಂದು ವಿಡಿಯೊದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಸೈಕಲ್ ಎಸೆಯುತ್ತಿರುವ ದೃಶ್ಯ ಸೆರೆಯಾಗಿದೆ.

RELATED ARTICLES

Related Articles

TRENDING ARTICLES