Friday, May 3, 2024

ರಾಮೇಶ್ವರ ಕೆಫೆ ಬ್ಲಾಸ್ಟ್ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ : ಶಾಸಕ ಯತ್ನಾಳ್ ಆಗ್ರಹ

ಬೆಂಗಳೂರು : ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಕೂಡಲೇ ರಾಜೀನಾಮೆ ನೀಡುವಂತೆ ಇಡೀ ಕರ್ನಾಟಕ ಆಗ್ರಹಿಸುತ್ತಿದೆ ಎಂದು ಹೇಳಿದ್ದಾರೆ.

ಮೊನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ. ಇಂದು ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ

ಗ್ರಾಹಕರು ಬಿಟ್ಟು ಹೋಗಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿದೆ. ಯಾವುದೇ ಸಿಲಿಂಡರ್ ಸ್ಫೋಟವಾಗಿಲ್ಲ. ಕೆಲ ದಿನಗಳ ಹಿಂದೆ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿತ್ತು. ಹೀಗಾಗಿ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES