Friday, May 3, 2024

ರಾಮೇಶ್ವರ ಕೆಫೆ ಬ್ಲಾಸ್ಟ್​: ಕಚ್ಚಾ ಬಾಂಬ್​ ಸ್ಪೋಟಿಸಿರುವ ಶಂಕೆ!

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕನೊಬ್ಬ ತಂದಿಟ್ಟಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿರುವುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಅದೇ ಬ್ಯಾಗ್‌ನಲ್ಲಿ ಕಚ್ಚಾ ಬಾಂಬ್ (ಐಇಡಿ) ಇದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಕೆಫೆಯಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಡಿವಿಆರ್ ಸುಪರ್ದಿಗೆ ಪಡೆದಿದಿದ್ದು ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: Rameshwaram Cafe: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಐವರು ಆಸ್ಪತ್ರೆಗೆ ದಾಖಲು

ಈ ಸಿಸಿಟಿವಿ ದೃಶ್ಯಗಳಲ್ಲಿ ಕಂಡು ಬಂದಿರುವ ಪ್ರಕಾರ ಮಧ್ಯಾಹ್ನ 12.55 ಕ್ಕೆ ಸ್ಪೋಟ ಸಂಭವಿಸಿದೆ. ಕೆಫೆ ಒಳಗೆ ಬಂದ ಗ್ರಾಹಕನೊಬ್ಬ ಕ್ಯಾಷಿಯರ್ ಬಳಿ ಹೋಗಿದ್ದ. ಕ್ಯಾಷಿಯರ್ ಪಕ್ಕದಲ್ಲಿರುವ ಕಟ್ಟೆಯ ಮೇಲೆ ಬ್ಯಾಗ್ ಇರಿಸಿದ್ದ. ಇದಾದ ನಂತರ, ಕೆಲ ನಿಮಿಷಗಳ ನಂತರ ಸ್ಪೋಟ ಸಂಭವಿಸಿರುವುದು ಗೊತ್ತಾಗಿದೆ. ಆದರೆ, ಬ್ಯಾಗ್‌ನಲ್ಲಿ ಇರುವುದು ಕಚ್ಚಾ ಬಾಂಬ್ ಅಥವಾ ಬೇರೆ ಯಾವುದಾದರೂ ಸ್ಪೋಟಕ ಇರಬಹುದೆಂಬ ಅನುಮಾನವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಫೋಟ ಸಂಭವಿಸಿದ್ದ ಸ್ಥಳದಲ್ಲಿ ಬಿಳಿ ಬಣ್ಣದ ಪೌಡರ್, ಬ್ಯಾಟರಿ ಪತ್ತೆಯಾಗಿದೆ. ಇವುಗಳನ್ನು ನೋಡಿದರೆ ಟಿಫಿನ್ ಬಾಕ್ಸ್ ಅಥವಾ ಬೇರೆ ರೀತಿಯಲ್ಲಿ ಕಚ್ಚಾ ಬಾಂಬ್ ಸಿದ್ಧಪಡಿಸಿರುವ ಬಗ್ಗೆ ಅನುಮಾನವಿದೆ. ಆದರೆ, ಯಾವುದಕ್ಕೂ ಸದ್ಯ ಖಚಿತತೆ ಇಲ್ಲ. ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರ ವರದಿಯಿಂದಲೇ ನಿಖರ ಮಾಹಿತಿ ತಿಳಿಯಲಿದೆ’ ಎಂದು ಅಧಿಕಾರಿ ವಿವರಿಸಿದರು.

RELATED ARTICLES

Related Articles

TRENDING ARTICLES