Friday, September 20, 2024

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅದೃಷ್ಟ ತರಲಿದ್ದಾನೆ ಶನಿ

2024 ಮಾರ್ಚ್ 2ರ ಶನಿವಾರವಾದ ಇಂದು, ಚಂದ್ರನು ತುಲಾ ನಂತರ ವೃಶ್ಚಿಕ ರಾಶಿಗೆ ಚಲಿಸಲಿದ್ದಾನೆ. ಅಲ್ಲದೇ ಇಂದು ಮಾಘ ಮಾಸದ ಕೃಷ್ಣ ಪಕ್ಷದ ಸಪ್ತಮಿ ತಿಥಿಯಾಗಿದ್ದು, ಈ ದಿನ ಹರ್ಷ ಯೋಗ, ತ್ರಿಪುಷ್ಕರ ಯೋಗ, ರವಿಯೋಗ ಹಾಗೂ ವಿಶಾಖ ನಕ್ಷತ್ರದ ಶುಭ ಸಂಯೋಗ ನಡೆಯುತ್ತಿದೆ. ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು ಎನ್ನುವುದನ್ನು ತಿಳಿದುಕೊಳ್ಳಿ.

ಮೇಷ: ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗುವ ಸಾಧ್ಯತೆ ಇದೆ. ಬ್ಯಾಂಕ್ ವ್ಯವಹಾರಗಳಲ್ಲಿ ಕಾಳಜಿ ವಹಿಸಬೇಕು. ನಿಮ್ಮ ಬಳಗದಲ್ಲಿ ಯಾವುದಾದರೂ ದುಃಖದ ಸನ್ನಿವೇಶ ನಡೆಬಹುದು. ನಿಮ್ಮ ಶ್ರಮ ಮತ್ತು ಸಮರ್ಪಣೆ ನಿಮ್ಮ ಪರವಾಗಿ ಮಾತನಾಡುತ್ತವೆ ಮತ್ತು ನಿಮಗೆ ವಿಶ್ವಾಸ ಮತ್ತು ಬೆಂಬಲ ಗಳಿಸಿ ಕೊಡುತ್ತವೆ.

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಏರುಪೇರಾಗಲಿದೆ. ಆರ್ಥಿಕವಾಗಿ ಪ್ರಗತಿ.

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದೆ. ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ, ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ.‌ ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.

ಇದನ್ನೂ ಓದಿ: Rameshwaram Cafe Blast: ತನಿಖೆ ತೀವ್ರವಾಗಿದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಸಿಎಂ

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ.

ಧನಸ್ಸು: ಆರೋಗ್ಯದ ಸಂಬಂಧ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ ಇದೆ. ಆದಷ್ಟು ಆಹಾರ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ ಬೆಳೆಸಬೇಕಾದಿತು. ಕೌಟುಂಬಿಕವಾಗಿ ಸಾಧಾರಣ ಫಲ.

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಕೌಟುಂಬಿಕವಾಗಿ ಶುಭ ಫಲ.

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.

RELATED ARTICLES

Related Articles

TRENDING ARTICLES