Thursday, September 19, 2024

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ನಿಜ!

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಸಂಬಂಧ FSL​ ವರದಿ ಹೊರ ಬಿದ್ದಿದ್ದು, ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ದೃಢಪಟ್ಟಿದೆ.

ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. FSL​ನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಪೋಟ ಸಂಬಂಧ ಇಂದು ಸಿಎಂ ಸಭೆ

ಎಫ್​ಎಸ್​ಎಲ್ ವರದಿ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಕೆಲ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಅನುಮಾನಿತರ ಪೈಕಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಎಫ್​ಎಸ್​ಎಲ್​ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ.

RELATED ARTICLES

Related Articles

TRENDING ARTICLES