Saturday, April 27, 2024

2008ರ ಮುಂಬೈ ದಾಳಿಯ ಸಂಚುಕೋರ ಚೀಮಾ ನಿಧನ!

ಮುಂಬೈ: 2008ರ ಮುಂಬೈ ಭಯೋತ್ಪಾದನಾ ದಾಳಿಯ ಸಂಚುಕೋರ ಅಜಮ್ ಚೀಮಾ ಪಾಕಿಸ್ತಾನದ ಫೈಸಲಾಬಾದ್ ದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

2006ರಲ್ಲಿ ಮುಂಬೈನಲ್ಲಿ ನಡೆದ ರೈಲು ಬಾಂಬ್ ಸ್ಫೋಟದಲ್ಲಿ 188 ಮಂದಿ ಸಾವನ್ನಪ್ಪಿದ್ದರು. ಅದರಲ್ಲಿ 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆಯ ಮಾಸ್ಟರ್ ಮೈಂಡ್ ಕೂಡ ಅಜಮ್ ಚೀಮಾ ಅಂತಾ ಹೇಳಲಾಗುತ್ತಿದೆ. 2008ರ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ ಒಟ್ಟು 166 ಜನರ ಸಾವಿಗೆ ಕಾರಣವಾದ ಭಯೋತ್ಪಾದಕರಿಗೆ ತರಬೇತಿ ನೀಡಿದ್ದ ಅಜಮ್ ಚೀಮಾ ಯುಎಸ್​​​ ಸರ್ಕಾರಕ್ಕೆ ಬೇಕಾಗಿದ್ದ ಎಂದು ಹೇಳಲಾಗಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಶಶ ರಾಜಯೋಗ, ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

ಇನ್ನು ಸಾವನ್ನಪ್ಪಿರುವ ಅಜಮ್ ಚೀಮಾನ ಅಂತ್ಯಕ್ರಿಯೆಯನ್ನು ಫೈಸಲಾಬಾದ್‌ನ ಮಲ್ಖಾನ್‌ವಾಲಾದಲ್ಲಿ ನಡೆಸಲಾಗಿದೆ ಎಂದು ವರದಿ ಹೇಳಿದೆ. ನವೆಂಬರ್ 26, 2008 ರಂದು, 10 ಪಾಕಿಸ್ತಾನಿ ಭಯೋತ್ಪಾದಕರು ಸಮುದ್ರ ಮಾರ್ಗದ ಮೂಲಕ ದಕ್ಷಿಣ ಮುಂಬೈ ಪ್ರದೇಶಗಳನ್ನು ಪ್ರವೇಶಿಸಿದರು ಹಾಗೂ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ದಾಳಿ ಮಾಡಿದರು. ಈ ದಾಳಿಯಲ್ಲಿ 166 ಜನರು ಮತ್ತು 18 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು.

RELATED ARTICLES

Related Articles

TRENDING ARTICLES