Friday, May 10, 2024

Pulse Polio: ಇಂದಿನಿಂದ ರಾಜ್ಯದಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ

ಬೆಂಗಳೂರು: ಇಂದಿನಿಂದ ಮಾರ್ಚ್ 6 ರವರೆಗೆ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಆಯೋಗ್ಯ ಇಲಾಖೆ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನುಆರೋಗ್ಯ ಇಲಾಖೆ ಆಯೋಜನೆ ಮಾಡಿದ್ದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆಯನ್ನು ಹಾಕಿಸಬೇಕೆಂಬ ಗುರಿಯನ್ನು ಹೊಂದಿದ್ದು. ಕಡಿಮೆ ಪ್ರಗತಿ ಹೊಂದಿರುವ ಪ್ರದೇಶಗಳಲ್ಲಿ ಹೆಚ್ಚು ನಿಗಾವನ್ನು ಇಲಾಖೆ ವಹಿಸಿಕೊಂಡು ಗ್ರಾಮಾಂತರ ಭಾಗಗಳಲ್ಲಿ ಮನೆ ಮನೆಗೂ ತೆರಳಿ ಲಸಿಕೆ ನೀಡಲು ಸೂಚನೆ ನೀಡಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪಲ್ಸ್  ಪೋಲಿಯೋ ಲಸಿಕೆ ಅನುಷ್ಠಾನಕಗೊಳಿಸಲು ಚಿಂತನೆ , ಮಾಡಿದ್ದು, 5 ವರ್ಷದ ಒಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದೆ.

ರಾಜ್ಯದಲ್ಲಿ ಪೋಲಿಯೊ ಹನಿ ವಿತರಣೆಗೆ 33,712 ಬೂತ್‌ ಗಳನ್ನು ಗುರುತಿಸಲಾಗಿದೆ. 963 ಸಂಚಾರಿ ತಂಡಗಳು ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. ಈ ಕಾರ್ಯಕ್ರಮಕ್ಕೆ 1.11 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ.

ರಾಜ್ಯದ ಎಲ್ಲ ಆಸ್ಪತ್ರೆಗಳು, ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ, ವಿಮಾನ ನಿಲ್ದಾಣ, ಗ್ರಾಮೀಣ ಪ್ರದೇಶ,ಅಂಗನವಾಡಿ ಕೇಂದ್ರ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲಾಗುತ್ತದೆ.

ಪಲ್ಸ್ ಪೋಲಿಯೊ ಹನಿಯನ್ನುಈ ಬಾರಿ 2. 5 ವರ್ಷದೊಳಗಿನ 62.85 ಲಕ್ಷ ಮಕ್ಕಳನ್ನು ತಲುಪುವ ಗುರಿ ಆರೋಗ್ಯ ಇಲಾಖೆ ಹಾಕಿಕೊಂಡಿದೆ

RELATED ARTICLES

Related Articles

TRENDING ARTICLES