Friday, May 17, 2024

ಘಾಟಿ ದೇವಾಲಯಕ್ಕೆ ಆಗಮಿಸಿದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ರಾಷ್ಟ್ರೀಯ ಪಲ್ಸ್​ ಪೋಲಿಯೊ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಮಾರ್ಚ್​.3 ಭಾನುವಾರ ರಾಷ್ಟ್ರೀಯ ಪಲ್ಸ್​ ಪೋಲಿಯೊ ಅಭಿಯಾನದಡಿ ದೇವಾಲಯಕ್ಕೆ ಆಗಮಿಸುವ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ದೇವಾಲಯದ ಪ್ರಧಾನ ಅರ್ಚಕ ನಾಗೇಂದ್ರ ಸ್ವಾಮಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮ

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಹಣಾ ಅಧಿಕಾರಿಗಳಾದ ನಾಗರಾಜು, ಘಾಟಿ ಸುಬ್ರಹ್ಮಣ್ಯ ದೇವಾಲಯದ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಗಳಾದ ಮಹದೇವ್ ನಾಯ್ಕ್. ಎಲ್, ನೇತ್ರಾವತಿ ಎಂ, ಶ್ರಾವಣಿ. ಬಿ, ಸರಿತಾ ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES