Thursday, May 9, 2024

ರಾಮೇಶ್ವರಂ ಕೆಪೆ ಸ್ಫೋಟ ಪ್ರಕರಣ: ಅಗತ್ಯ ಬಿದ್ದರೆ NIAಗೆ ಹಸ್ತಾಂತರಿಸುತ್ತಿವೆ: ಸಿಎಂ ಸಿದ್ದರಾಮಯ್ಯ  

ಚಿಕ್ಕಮಗಳೂರು: ಅಗತ್ಯ ಬಿದ್ದರೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

NIA ತನಿಖೆಗೆ ಬಿಜೆಪಿ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಚಿಂತನೆ ನಡೆಸುತ್ತೇವೆ. ಇದೀಗ ತನಿಖೆ ಆರಂಭವಾಗಿದೆ.ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಿಲ್ಲ. ಎನ್ಐಎ ತನಿಖೆ ಅಗತ್ಯವಿದ್ದಲ್ಲಿ ನಾವು ಆ ಬಗ್ಗೆ ಯೋಚಿಸುತ್ತೇವೆ ಎಂದರು.

ಬಿಜೆಪಿ ಆಡಳಿತಾವಧಿಯಲ್ಲಿ ನಾಲ್ಕು ಬಾಂಬ್ ಸ್ಫೋಟಗಳು ನಡೆದಿದ್ದವು

ಬ್ರಾಂಡ್ ಬೆಂಗಳೂರು ಎನ್ನುವ ಬದಲು ಬಾಂಬ್ ಬೆಂಗಳೂರು ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತಾವಧಿಯಲ್ಲಿ ನಾಲ್ಕು ಬಾಂಬ್ ಸ್ಫೋಟಗಳು ನಡೆದಿದ್ದವು. ಆಗ ಅದನ್ನು ಏನೆಂದು ಕರೆಯಬೇಕು? ಮಂಗಳೂರು ಕುಕ್ಕರ್ ಸ್ಫೋಟ ನಡೆದಾಗ ಆಡಳಿತ ನಡೆಸುತ್ತಿದ್ದವರು ಯಾರು? ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಸ್ಫೋಟ ಸಂಭವಿಸಿದೆ ಎಂದು ಕಿಡಿಕಾರಿದರು.

RELATED ARTICLES

Related Articles

TRENDING ARTICLES