Tuesday, May 21, 2024

ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು FSL​​ ವರದಿಯಲ್ಲಿ ದೃಢ: ಬಿಜೆಪಿ

ಬೆಂಗಳೂರು: ವಿಧಾನಸೌಧದ ಒಳಗೆ ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಬಿಜೆಪಿ ಹೇಳಿದೆ.

ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ ವರದಿಯಲ್ಲಿ ಬಹಿರಂಗವಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ” ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದೆ.

“ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್​ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು” ಎಂದು ಆಗ್ರಹಿಸಿದೆ.

RELATED ARTICLES

Related Articles

TRENDING ARTICLES