ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ.
“2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಸಿಎಂ ಆಗಿರುವ ಅವಧಿಯಲ್ಲಾಗಲೀ ಬಿಲ್ ಪಾವತಿಗೆ ಸಂಬಂಧಿಸಿದಂತೆ ಎಲ್ಒಸಿ ನೀಡುವಲ್ಲಿ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದು ಬಿಜೆಪಿಯವರ ಟೀಕೆಗಳಿಗೆ ಸಿಎಂ ಸವಾಲು ಹಾಕಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.