Thursday, May 16, 2024

WPL 2024: ಇಂದು UPW vs RCB ಪಂದ್ಯ

ಬೆಂಗಳೂರು: ಯುಪಿ ವಾರಿಯರ್ಸ್ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ನಡುವಿನ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ.

ವುಮೆನ್ಸ್​ ಪ್ರೀಮಿಯರ್ ಲೀಗ್​ನ 11ನೇ ಹೈವೋಲ್ಟೇಜ್​ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಾಕ್ಷಿಯಾಗಲಿದೆ.ಇವತ್ತಿನ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಆರ್​ಸಿಬಿ ತಂಡದ ಮುಂದಿದೆ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲನುಭವಿಸಿದೆ.

ಈ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಪಂದ್ಯ. ಮುಂದಿನ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹೀಗಾಗಿ ತವರಿನ ಅಭಿಮಾನಿಗಳ ಮುಂದೆ ಕೊನೆಯ ಬಾರಿ ಕಣಕ್ಕಿಳಿಯಲು ಆರ್​ಸಿಬಿ ಸಜ್ಜಾಗಿದೆ.ಯುಪಿ ವಾರಿಯರ್ಸ್ ವಿರುದ್ಧದ ಮೊದಲ ಪಂದ್ಯವನ್ನು ಆರ್​ಸಿಬಿ ಕೇವಲ 2 ರನ್​ಗಳಿಂದ ಗೆದ್ದುಕೊಂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಯುಪಿ ವಾರಿಯರ್ಸ್​ (UPW) ತಂಡ

ಅಲಿಸ್ಸಾ ಹೀಲಿ (ನಾಯಕಿ),ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ಕಿರಣ್ ನವಗಿರೆ, ಚಾಮರಿ ಅಥಾಪತ್ತು, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್, ತಹ್ಲಿಯಾ, ಡ್ಯಾನಿ ವ್ಯಾಟ್, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್, ಏಕ್ತಾ ಬಿಶ್ತ್, ಕೇಟ್ ಕ್ರಾಸ್, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್.

RELATED ARTICLES

Related Articles

TRENDING ARTICLES