Thursday, May 9, 2024

ED Case: ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು ಮಾಡಿದ ಸುಪ್ರೀಂ ಕೋರ್ಟ್; ಡಿ.ಕೆ. ಶಿವಕುಮಾರ್​ಗೆ ಬಿಗ್ ರಿಲೀಫ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧ‌ಪಟ್ಟಂತೆ ಇಡಿ ದಾಖಲು ಮಾಡಿದ್ದ ಪ್ರಕರಣದಲ್ಲಿ  ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್​ ಬಿಗ್ ರಿಲೀಫ್ ನೀಡಿದೆ.

ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120B ಅಡಿ ದಾಖಲು ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ.

ಏನಿದು ಪ್ರಕರಣ?

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ನವ ದೆಹಲಿಯಲ್ಲಿ ಬಂಧಿಸಿ ತಿಹಾರ್‌ ಜೈಲಿಗೆ ಕಳಿಸಿತ್ತು. ತನಿಖೆ ಪೂರ್ಣಗೊಳಿಸಿರುವ ಇ.ಡಿ ಜೂನ್‌ ಕೊನೆಯ ವಾರದಲ್ಲಿ ದೋಷಾರೋಪ ಪಟ್ಟಿಯನ್ನು ದೆಹಲಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ದೆಹಲಿಯ ಸಫ್ಧರ್‌ಜಂಗ್ ಅಪಾರ್ಟ್‌ಮೆಂಟ್‌ನಲಿ ಸಿಕ್ಕ 6.61 ಕೋಟಿ ರೂ. ಡಿ.ಕೆ.ಶಿವಕುಮಾರ್ ಅವರದ್ದೇ ಎಂದು ವಿಚಾರಣೆ ವೇಳೆ ಆರೋಪಿ ಆಂಜನೇಯ ಬಾಯಿ ಬಿಟ್ಟಿದ್ದರು. ಡಿ.ಕೆ. ಶಿವಕುಮಾರ್‌ ಅವರ ಅಕ್ರಮ ಹಣದ ವ್ಯವಹಾರವನ್ನು ರಾಜೇಂದ್ರ ಹಾಗೂ ಆಂಜನೇಯ ನೋಡಿಕೊಳ್ಳುತ್ತಿದ್ದರು. ಸುರೇಶ್ ಶರ್ಮಾ ಅವರ ಫ್ಲಾಟ್‌ ಅನ್ನು ಡಿ.ಕೆ.ಶಿವಕುಮಾರ್ ಹಾಗೂ ಸುನಿಲ್ ಶರ್ಮಾ ಹಾಗೂ ಡಿಕೆಶಿ ಅಕ್ರಮ ಹಣ ಸಂಗ್ರಹಣೆ ಬಳಸುತ್ತಿದ್ದರು. ಡಿಕೆಶಿ ಸೂಚನೆ ಮೇರೆಗೆ 1 ಕೋಟಿ ರೂ., 2 ಕೋಟಿ ರೂ., 1.5 ಕೋಟಿ ರೂ. ಹೀಗೆ ಹಲವು ಬಾರಿ ಸಾಗಾಟ ಮಾಡಲಾಗಿದೆ. ಏನೇ ಸಮಸ್ಯೆ ಬಂದರೂ ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಆಂಜನೇಯಗೆ ಹೇಳಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ಜಾಗ ಕೊಡುವ ಭರವಸೆ ನೀಡಿದ್ದಾರೆ ಎಂಬ ಮಹತ್ವದ ಅಂಶಗಳು ಇ.ಡಿ. ಚಾರ್ಜ್‌ಶೀಟ್‌ನಲ್ಲಿವೆ.

RELATED ARTICLES

Related Articles

TRENDING ARTICLES