Friday, May 10, 2024

ರಾಜ್ಯದ ಶಾಲೆಗಳಲ್ಲಿ ಪಬ್ಲಿಕ್​ ಪರೀಕ್ಷೆ ರದ್ದು: ಹೈಕೋರ್ಟ್​

ಬೆಂಗಳೂರು : 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್‌ ಪರೀಕ್ಷೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

2023ರ ಡಿಸೆಂಬರ್ ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್‌ ಎಕ್ಸಾಂ ಸುತ್ತೋಲೆಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಹೀಗಾಗಿ ಈ ಬಾರಿ ಈ ಕ್ಲಾಸ್‌ಗಳಿಗೆ ಬೋರ್ಡ್‌ ಎಕ್ಸಾಂ ಇರುವುದಿಲ್ಲ.

ಇದನ್ನೂ ಓದಿ: ಮಂಡ್ಯ ಕಾಂಗ್ರೆಸ್​ ನಲ್ಲಿ ಭಿನ್ನಮತ: ಕೆಪಿಸಿಸಿ ಕಾರ್ಯದರ್ಶಿ ಹುದ್ದೆಗೆ ರವೀಂದ್ರ ರಾಜೀನಾಮೆ

ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ ನಾಗೇಶ್ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ ನಡೆಸುವ ಚಿಂತನೆ ಮಾಡಲಾಗಿತ್ತು.

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ವಾದವಾಗಿತ್ತು.

ಆದರೆ, ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಇದೀಗ ಹೈಕೋರ್ಟ್‌ ಪರೀಕ್ಷೆ ಸುತ್ತೋಲೆಯನ್ನು ರದ್ದು ಮಾಡಿರುವುದರಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ.

RELATED ARTICLES

Related Articles

TRENDING ARTICLES