Sunday, September 8, 2024

5ನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡ ಪ್ರಕಟ : ಯಾರು ಇನ್? ಯಾರು ಔಟ್?

ಬೆಂಗಳೂರು : ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಹನ್ನೊಂದರ ತಂಡವನ್ನು ಪ್ರಕಟಿಸಲಾಗಿದೆ.

ಮಾರ್ಚ್ 7 ರಿಂದ (ನಾಳೆ) ಧರ್ಮಶಾಲಾದಲ್ಲಿ ಆರಂಭವಾಗಲಿರುವ ಅಂತಿಮ ಟೆಸ್ಟ್​ ಪಂದ್ಯಕ್ಕೆ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಆಲಿ ರಾಬಿನ್ಸನ್​ ಬದಲಿಗರ ಮಾರ್ಕ್​ ವುಡ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI

ಬೆನ್ ಸ್ಟೋಕ್ಸ್​ (ನಾಯಕ), ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಫೋಕ್ಸ್​, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್​, ಜೇಮ್ಸ್​ ಆಂಡರ್ಸನ್, ಶೋಯೆಬ್​ ಬಶೀರ್

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಪುನಾರಗಮನವಾಗಿದ್ದು, ಗಾಯದಿಂದ ಬಳಲುತ್ತಿರುವ ಕೆ.ಎಲ್ ರಾಹುಲ್ ತಂಡದಿಂದ ದೂರ ಉಳಿದಿದ್ದಾರೆ. ಈ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ಪ್ಲೇಯಿಂಗ್ XIನಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.

5ನೇ ಟೆಸ್ಟ್​ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಭರತ್, ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್​ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

RELATED ARTICLES

Related Articles

TRENDING ARTICLES