Saturday, May 18, 2024

ಕನ್ನಡ ಬೋರ್ಡ್ ಕಡ್ಡಾಯ; ಕರವೇ ಎಚ್ಚರಿಕೆ!

ಶಿವಮೊಗ್ಗ: ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ, ಕರ್ನಾಟಕ ರಕ್ಷಣ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಿಂದ ಡಿ.ಸಿ. ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಡಿ.27 ರಂದು ಕನ್ನಡ ನಾಮಫಲಕ ಕಡ್ಡಾಯ ಹೋರಾಟದಲ್ಲಿ ನೂರಾರು ಕನ್ನಡ ಕಾರ್ಯಕರ್ತರು ಜೈಲು ಸೇರಿದ್ದರು. ಈ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಕಾನುನಾಗಿ ಜಾರಿಯಾಗಿದೆ. ಈ ಕಾನೂನು ಪರಿಪೂರ್ಣವಾಗಿ ಜಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಕನ್ನಡಿಗರ ಮೇಲಿದೆ ಎಂದುಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ: ಅನಂತಕುಮಾರ್ ಹೆಗಡೆಯವರಿಗೆ ಸಂಸ್ಕೃತಿ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಕಾನೂನನ್ನು ಉಲ್ಲಂಘಿಸಿದರೆ ಮುಂಬರುವ ದಿನಗಳಲ್ಲಿ ವೇದಿಕೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

RELATED ARTICLES

Related Articles

TRENDING ARTICLES