Wednesday, July 3, 2024

ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆ ಪಾದಯಾತ್ರೆ

ಚಾಮರಾಜನಗರ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕೆಂದು 102 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ.

ತುಮಕೂರು ಜಿಲ್ಲೆ ತಿಪಟೂರು ಮೂಲದ ಪಾರ್ವತಮ್ಮ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಮಾದಪ್ಪನ ದರ್ಶನಕ್ಕೆ 18 ಕಿಲೋಮೀಟರ್ ಕಾಲ್ನಡಿಗೆ ಮೂಲಕ ಮೋದಿಗಾಗಿ ಪಾದಯಾತ್ರೆ ಮಾಡುತ್ತಿದ್ದಾಳೆ.

ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಹಾಗೆ ಆದರೆ ಅಲ್ಲವೇ ರೈತರಿಗೆ ಒಳಿತಾಗುವುದು? ಅದೇ ರೀತಿ ಕಾಡು ಪ್ರಾಣಿಗಳಿಗೂ ಒಳ್ಳೆಯದಾಗಬೇಕು. ಅವುಗಳಿಗೆ ಕುಡಿಯುವ ನೀರು ದೊರೆಯುವಂತಾಗಬೇಕು. ಈ ಎಲ್ಲ ಬೇಡಿಕೆಗಳನ್ನು ದೇವರ ಮುಂದಿಟ್ಟುಕೊಂಡು ಮಹದೇಶ್ವರನ ದರ್ಶನಕ್ಕೆ ಬರುತ್ತಿದ್ದೇನೆ ಎಂದರು.

ಮೋದಿ ಮತ್ತೆ ಯಾಕೆ ಪ್ರಧಾನಿಯಾಗಬೇಕು? 

ದೇಶಕ್ಕೆ ಒಳ್ಳೆಯದಾಗಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ವೃದ್ಧೆ ತನ್ನ ಜೊತೆಗಿನ ಪಾದಯಾತ್ರೆಗಳಿಗೆ ಹೇಳಿದ್ದಾರೆ. ನಿಮ್ಮ ಆಶೀರ್ವಾದ ಇದ್ದರೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಿಯೇ ಆಗುತ್ತಾರೆ ಎಂದು ಸ್ಥಳದಲ್ಲಿ ಇದ್ದವರು ಹೇಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ ಸಖತ್​ ವೈರಲ್​ ಆಗಿದೆ. ನಿಮ್ಮ ಆಶೀರ್ವಾದ ನಮ್ಮ ಮೇಲೂ ಇರಲಿ ಅಜ್ಜಿ ಎಂದು ಸಹ ಯಾತ್ರಿಗಳು ಅಜ್ಜಿಯಲ್ಲಿ ಬೇಡಿಕೊಂಡಿದ್ದಾರೆ. ವೃದ್ಧೆಯ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವೃದ್ಧೆ 5-6 ವರ್ಷಗಳಿಂದ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ.

 

RELATED ARTICLES

Related Articles

TRENDING ARTICLES