Friday, September 20, 2024

ರಾಜ್ಯದಲ್ಲಿ ಆ್ಯಸಿಡ್​ ನಿಷೇಧ: ಗೃಹಸಚಿವ ಡಾ.ಜಿ. ಪರಮೇಶ್ವರ

ಬೆಂಗಳೂರು : ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಆ್ಯಸಿಡ್ ನಿಷೇಧದ ಕುರಿತು ಚಿಂತನೆ ನಡೆಸಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ನಗರದ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದುರ್ಬಳಕೆಯಾಗುತ್ತಿದೆ. ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಅಗತ್ಯತೆ ಇರುವವರಿಗೆ ಹೊರತುಪಡಿಸಿ ಬೇರೆ ಯಾರಿಗೂ ಆ್ಯಸಿಡ್​ ಸಿಗಬಾರದು. ಈ ಕುರಿತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಇನ್ನೆರಡು ದಿನದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಇಂಡಸ್ಟ್ರಿಗಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Rameshwaram Cafe: ಬಾಂಬರ್​ ತುಮಕೂರು ಮಾರ್ಗವಾಗಿ ಭಟ್ಕಳಕ್ಕೆ ತೆರಳಿರುವ ಶಂಕೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಕೆಲದಿನಗಳ ಹಿಂದೆ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಕೇರಳ ಮೂಲದ ಅಭಿನ್‌ ಎಂಬಾತ ಈ ಕೃತ್ಯ ಎಸಗಿದ್ದ. ಕಡಬದ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ ಸಂಬಂಧ ಆರೋಪಿ ಅಭಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ದಾಳಿಗೆ ಒಳಗಾದ ವಿದ್ಯಾರ್ಥಿನಿಯರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡುವುದುದಾಗಿ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ಅಲ್ಲದೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರನ್ನು ಅವರು ಭೇಟಿ ಮಾಡಿ ಸಾಂತ್ವನ ಹೇಳಿದ್ದರು‌.

RELATED ARTICLES

Related Articles

TRENDING ARTICLES