Tuesday, May 14, 2024

ಕರ್ನಾಟಕದ 14 ಅಭ್ಯರ್ಥಿಗಳ ಹೆಸರು ಫೈನಲ್ : ಇನ್ನೆರಡು ದಿನಗಳಲ್ಲಿ ಮೊದಲ ಪಟ್ಟಿ ರಿಲೀಸ್

ನವದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆ ಮೊದಲ ಪಟ್ಟಿಯಲ್ಲಿ ಕರ್ನಾಟಕದ 14 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್​ ಆಗಿದ್ದು, ಇನ್ನೆರಡು ದಿನಗಳಲ್ಲಿ ಮೊದಲ ಪಟ್ಟಿ ರಿಲೀಸ್ ಆಗಲಿದೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಿಇಸಿ ಸಭೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಉಳಿದಂತೆ 28 ಕ್ಷೇತ್ರಗಳ ಬಗ್ಗೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ.

ಸಿಇಸಿ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಸಿಎಂ ಸಿದ್ದರಾಮಯ್ಯ ಜೂಮ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. 50 ಪರ್ಸೆಂಟ್ ಕ್ಷೇತ್ರಗಳಿಗೆ ಚರ್ಚೆ ಮಾಡಲಾಗಿದೆ. ಎಷ್ಟು ಕ್ಷೇತ್ರಗಳು ಅಂತ ಹೇಳಲು ಸಾಧ್ಯವಿಲ್ಲ. ಉಳಿದದ್ದು ಎಐಸಿಸಿ ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಹೈಕಮಾಂಡ್​ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರವಾನೆ : ಶೇ.35ರಷ್ಟು ಹಾಲಿ ಸಂಸದರಿಗೆ ಕೊಕ್? : ಇಲ್ಲಿದೆ ಸಂಭಾವ್ಯ ಪಟ್ಟಿ

ಇನ್ನೆರಡು ದಿನಗಳಲ್ಲಿ ಪಟ್ಟಿ ಬಿಡುಗಡೆ

ಸಿಇಸಿ ಸದಸ್ಯ ಕೆ.ಜೆ. ಜಾರ್ಜ್ ಮಾತನಾಡಿ, ಎಲ್ಲಾ ಎಐಸಿಸಿಯವರು ಕರೆಕ್ಟಾಗಿ ಹೇಳ್ತಾರೆ. ಎಲ್ಲಾ ಕ್ಷೇತ್ರಗಳ ಡಿಸ್ಕಷನ್ ಮಾಡಿದ್ದೇವೆ. ಸಿಂಗಲ್ ನೇಮ್ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES