Tuesday, September 17, 2024

6,6,6.. ಇಂಗ್ಲೆಂಡ್ ವಿರುದ್ಧ ಯಶಸ್ವಿ ಜೈಸ್ವಾಲ್ ಅರ್ಧಶತಕ, ಸಚಿನ್ ದಾಖಲೆ ಉಡೀಸ್

ಬೆಂಗಳೂರು : ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಬೊಂಬಾಟ್ ಅರ್ಧಶತಕ ದಾಖಲಿಸಿದರು.

ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ಬೌಲರ್​ಗಳನ್ನು ಮನಬಂದಂತೆ ದಂಡಿಸಿದರು.

58 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್, 5 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ನೆರವಿನೊಂದಿಗೆ 57 ರನ್​ ಸಿಡಿಸಿದರು. ಈ ಮೂಲಕ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕವೂ ಜೈಸ್ವಾಲ್​ ಬ್ಯಾಟ್ ಘರ್ಜಿಸಲು ಆರಂಭಿಸಿತು. ಆದರೆ, ಶೋಯೆಬ್ ಬಶೀರ್ ಎಸೆತದಲ್ಲಿ ಸ್ಟಂಪ್ಡ್ ಔಟ್ಆಗುವ ಮೂಲಕ ನಿರಾಸೆ ಮೂಡಿಸಿದರು.

ಸಚಿನ್ ದಾಖಲೆ ಮುರಿದ ಜೈಸ್ವಾಲ್

ಇನ್ನೂ ಇಂಗ್ಲೆಂಡ್ ವಿರುದ್ಧದ ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಹೊಸ ದಾಖಲೆ ಬರೆದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಎದುರಾಳಿಯ ತಂಡದ ವಿರುದ್ಧ ಭಾರತೀಯ ಬ್ಯಾಟರ್ ಒಬ್ಬ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ದಾಖಲೆ ತನ್ನ ಹೆಸರಿಗೆ ಬರೆದುಕೊಂಡರು. ಯಶಸ್ವಿ ಜೈಸ್ವಾಲ್ 26 ಸಿಕ್ಸರ್ ಸಿಡಿಸಿದ್ದರೆ, ಆಸ್ಟ್ರೇಲಿಯಾ ಸರಣಿಯಲ್ಲಿ ಸಚಿನ್ ತೆಂಡೂಲ್ಕರ್ 25 ಸಿಕ್ಸರ್ ಸಿಡಿಸಿದ್ದರು.

RELATED ARTICLES

Related Articles

TRENDING ARTICLES