Friday, September 20, 2024

ಶಿವರಾತ್ರಿ ಹಬ್ಬದ ಹಿನ್ನೆಲೆ ಅರಮನೆಗೆ ಬಂತು 11 ಕೆಜಿ ತೂಕದ ಚಿನ್ನದ ಶಿವನ ಮುಖವಾಡ

ಮೈಸೂರು: ನಾಳೆ ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ ದೇವಸ್ಥಾನದಲ್ಲಿರುವ ಶಿವನಿಗೆ 11 ಕೆಜಿ ತೂಕದ ಚಿನ್ನದ ಶಿವನ ಮುಖವಾಡದ ಕೊಳಗವನ್ನು ಧಾರಣೆ ಮಾಡುವುದು ಸಾಂಪ್ರದಾಯ.‌ ಹೀಗಾಗಿ, ಆ ಚಿನ್ನದ ಕೊಳಗವನ್ನು ಜಿಲ್ಲಾ ಖಜಾನೆಯಿಂದ ಇಂದು ದೇವಸ್ಥಾನಕ್ಕೆ ಹಸ್ತಾಂತರಿಸಿದೆ.

ಇದನ್ನೂ ಓದಿ: ಸರ್ಕಾರದಿಂದಲೇ ಟ್ಯಾಂಕರ್ ನೀರಿಗೆ ದರ ಫಿಕ್ಸ್!

ವಿಶ್ವ ಪ್ರಸಿದ್ದ ಮೈಸೂರಿನ ಅಂಬಾವಿಲಾಸ ಅರಮನೆಯ ಆವರಣದಲ್ಲಿರುವ ತ್ರಿನಯನೇಶ್ವರ ದೇವಸ್ಥಾನದಲ್ಲಿರುವ ಶಿವನಿಗೆ ಮಹಾಶಿವರಾತ್ರಿ ಹಬ್ಬದಂದು ಬೆಳಗಿನ ಜಾವ ವಿಶೇಷ ಅಭಿಷೇಕ ಹಾಗೂ ಪೂಜೆ ಸಲ್ಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಶಿವನಿಗೆ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ನೀಡಿರುವ 11 ಕೆಜಿ ತೂಕದ ಬಾಲ ಶಿವನ ಕೊಳವನ್ನ ತೊಡಿಸಲಾಗುವುದು. ಆನಂತರ ಶಿವರಾತ್ರಿ ಪೂಜೆಗಳು ನಡೆಯಲಿದೆ.

ಈ ಹಿನ್ನೆಲೆ ಇಂದು ಪೊಲೀಸ್ ಭದ್ರತೆಯೊಂದಿಗೆ ಅರಮನೆಗೆ 11 ಕೆ.ಜಿ. ತೂಕದ ಅಪರಂಜಿ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದ್ದು, ನಾಳೆ ಬೆಳಗ್ಗೆ ತ್ರೀನೇಶ್ವರನಿಗೆ ಚಿನ್ನದ ಮುಖವಾಡ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

RELATED ARTICLES

Related Articles

TRENDING ARTICLES