Saturday, May 4, 2024

ಸರ್ಕಾರದಿಂದಲೇ ಟ್ಯಾಂಕರ್ ನೀರಿಗೆ ದರ ಫಿಕ್ಸ್!

ಬೆಂಗಳೂರು : ವಾಟರ್ ಟ್ಯಾಂಕರ್ ಕಳ್ಳಾಟಕ್ಕೆ ಸರ್ಕಾರ ಕೊನೆಗೂ ಬ್ರೇಕ್​​​​​ ಹಾಕಿದೆ. ಟ್ಯಾಂಕರ್ ನೀರಿಗೆ ದರ ಫಿಕ್ಸ್ ಮಾಡಿ‌‌‌‌‌‌ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇದನ್ನೂ ಓದಿ: Rameshwaram Cafe: ಬಾಂಬರ್​ ತುಮಕೂರು ಮಾರ್ಗವಾಗಿ ಭಟ್ಕಳಕ್ಕೆ ತೆರಳಿರುವ ಶಂಕೆ

3-4 ಬಾರಿ ಟ್ಯಾಂಕರ್ ಮಾಲೀಕರ ಜೊತೆ ಸಭೆ ನಡೆಸಿ, ಕೊನೆಗೂ ದರ ಫಿಕ್ಸ್ ಮಾಡಿ ಆದೇಶ ಹೊರಡಿಸಿದೆ. 6 ಸಾವಿರ ಲೀಟರ್ ಟ್ಯಾಂಕರ್​ಗೆ 600 ರೂ. ದರ ನಿಗದಿ. ಇದು 5 ಕಿಲೋ ಮೀಟರ್ ವ್ಯಾಪ್ತಿಯೊಳಗಡೆಗೆ ಅನ್ವಯ ಆಗಲಿದೆ. ಇನ್ನು 6 ಸಾವಿರ ಲೀಟರ್ ಟ್ಯಾಂಕರ್ ಗೆ 750 ರೂ. ದರ ನಿಗದಿ ಪಡಿಸಲಾಗಿದ್ದು, ಇದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ .ಅದೇ ರೀತಿ 8 ಸಾವಿರ ಲೀಟರ್ ಟ್ಯಾಂಕರ್​ಗೆ 700 ರೂ. ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿಲೋ ಮೀಟರ್ ಒಳಗೆ ಅನ್ವಯಿಸಲಿದೆ. 8 ಸಾವಿರ ಲೀಟರ್​ಗೆ 850 ರೂ. ದರ ನಿಗದಿ ಮಾಡಲಾಗಿದ್ದು, 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ದರ ವಿಧಿಸಬೇಕೆಂದು ಆದೇಶಿಸಲಾಗಿದೆ. 5 ಕಿಲೋ ಮೀಟರ್ ವ್ಯಾಪ್ತಿಗೆ 12,000 ಲೀಟರ್ ಟ್ಯಾಂಕರ್​​ಗೆ 1000 ರೂ. ದರ ನಿಗದಿ ಮಾಡಲಾಗಿದೆ. ಅಲ್ಲದೇ ಈ ದರವನ್ನ ಜಿಎಸ್ಟಿಯೊಂದಿಗೆ ಫಿಕ್ಸ್ ಮಾಡಲಾಗಿದೆ.

RELATED ARTICLES

Related Articles

TRENDING ARTICLES