Friday, May 17, 2024

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆ ಭರ್ತಿ : ಮತ್ತೊಂದು ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ

ಗುಜರಾತ್ : ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮತ್ತೊಂದು ಗ್ಯಾರಂಟಿ ಘೋಷಿಸಿದ್ದಾರೆ.

ಗುಜರಾತ್​ನಲ್ಲಿ ಸಾಗುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆಯಲ್ಲಿ ರಾಹುಲ್ ಗಾಂಧಿ ಯುವಜನತೆಗೆ ಭರವಸೆ ನೀಡಿದ್ದಾರೆ.

ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ 30 ಲಕ್ಷ ಹುದ್ದೆ ಭರ್ತಿ ಮಾಡಲಾಗುವುದು. ಜೊತೆಗೆ ನಿರುದ್ಯೋಗಿಗಳಿಗೆ ಅಪ್ರೆಂಟಿಂಷಿಪ್​ ತರಬೇತಿ ನೀಡಲಾಗುತ್ತದೆ. ಡಿಗ್ರಿ, ಡಿಪ್ಲೋಮಾ ಪಡೆದವರು ಅಪ್ರೆಂಟಿಂಷಿಪ್​ಗೆ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಂಷಿಪ್​ಗೆ ನೇಮಕಗೊಂಡವರಿಗೆ ಮೊದಲ ವರ್ಷಕ್ಕೆ ಒಂದು ಲಕ್ಷ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.

ದೇಶದಲ್ಲಿ 30 ಲಕ್ಷ ಸರ್ಕಾರಿ ಉದ್ಯೋಗಗಳು ಖಾಲಿ ಇವೆ. ಇವುಗಳ ಪೈಕಿ ಶೇ.90 ರಷ್ಟು ಉದ್ಯೋಗ ಭರ್ತಿ ಮಾಡುತ್ತೇವೆ. ಸರ್ಕಾರಿ ಕಂಪನಿ, ಕಚೇರಿಗಳಲ್ಲಿ ಅಪ್ರೆಂಟಿಂಷಿಪ್ ಹಕ್ಕು ಜಾರಿ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದಿಂದ ದೇಶದ ಜನರಿಗೆ ಮತ್ತೊಂದು ಭರವಸೆ ನೀಡಲಾಗಿದೆ.

ಮುಂದುವರಿದ ಕಾಂಗ್ರೆಸ್ ಸಿಇಸಿ ಸಭೆ

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಇಸಿ ಸಭೆ ಮುಂದುವರಿದಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕರ್ನಾಟಕ ಕ್ಲಸ್ಟರ್ ಮುಖ್ಯಸ್ಥ ಹರೀಶ್ ಚೌದರಿ ಮತ್ತು ಜಿಗ್ನೇಶ್ ಮೆವಾನಿ ಭಾಗಿಯಾಗಿದ್ದಾರೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ 14 ಕ್ಷೇತ್ರಗಳ ಬಗ್ಗೆ ಅಂತಿಮ ನಿರ್ಧಾರವಾಗಿದ್ದು, ಉಳಿದಂತೆ 28 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES