Monday, May 6, 2024

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು: ಮಧು ಬಂಗಾರಪ್ಪ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕಲಬುರಗಿ ನಗರದ KKRDB ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಭಾಗದಲ್ಲಿ 14 ಸಾವಿರ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಲಾಗಿದೆ. ಕೆಲ ಶಿಕ್ಷಕರ ನೇಮಕಾತಿ ಕೋರ್ಟ್‌ನಲ್ಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 3900 ಶಿಕ್ಷಕರನ್ನ ನಿಯೋಜಿಸಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿರೋದು ನನ್ನ ಗಮನಕ್ಕೆ ಬಂದಿದೆ ಎಂದರು.

ಇದನ್ನೂ ಓದಿ: 8 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ 124 ಕರ್ನಾಟಕ ಪಬ್ಲಿಕ್​ ಶಾಲೆಗಳಿವೆ. ಕೆಪಿಎಸ್-ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದ್ದು ಒಂದು ಗ್ರಾಮ ಪಂಚಾಯತಿಗೆ ಎರಡು ಕೆಪಿಎಸ್ ಶಾಲೆ ಕೊಡಲು ಉದ್ದೇಶಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 500 ಕೆಪಿಎಸ್ ಶಾಲೆಗಳನ್ನ ನೀಡಲು ನಿರ್ಧಾರ ಮಾಡಲಾಗಿದೆ.

ಹಿಂದಿನ ಸರ್ಕಾರ ಮಕ್ಕಳಿಗೆ ವಾರಕ್ಕೆ ಕೇವಲ ಒಂದು ಮೊಟ್ಟೆ ಕೊಡುತ್ತಿತ್ತು. ಆದರೆ ನಮ್ಮ ಸರ್ಕಾರ 10 ನೇ ತರಗತಿವರೆಗೆ ವಾರಕ್ಕೆ ಎರಡು ಮೊಟ್ಟೆ ಕೊಡಲು ನಿರ್ಧರಿಸಿದ್ದೇವು. ನವೆಂಬರ್ 1 ರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES