Sunday, April 28, 2024

8 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ 8 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಚಲನೆಯು ಪೂರ್ವ ಅಸ್ಸಾಂನಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿದೆ. ಇದು ಪೂರ್ವದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಇದರಿಂದಾಗಿ ಮುಂದಿನ 24 ಗಂಟೆಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಮಹಿಳೆಯರಿಗೆ ಗುಡ್​ ನ್ಯೂಸ್​: LPG ಸಿಲಿಂಡರ್‌ ದರ 100 ರೂ. ಇಳಿಕೆ

ಕರ್ನಾಟಕ ಹವಾಮಾನ: 

ಇನ್ನು ರಾಜ್ಯದ ಕಲಬುರ್ಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 15.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

RELATED ARTICLES

Related Articles

TRENDING ARTICLES