Sunday, May 12, 2024

ಮಹಿಳೆಯರಿಗೆ ಗುಡ್​ ನ್ಯೂಸ್​: LPG ಸಿಲಿಂಡರ್‌ ದರ 100 ರೂ. ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ದೇಶದ ಗೃಹಿಣಿಯರಿಗೆ ಕೇಂದ್ರ ಸರ್ಕಾರವು ಗುಡ್‌ ನ್ಯೂಸ್‌ ನೀಡಿದೆ.

ಹೌದು, ಮಹಿಳಾ ದಿನ ಹಿನ್ನೆಲೆ ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ದರ ಇಳಿಕೆ ಮಾಡಿದ್ದು ಮಹಿಳೆಯರಿಗೆ ಬಂಪರ್ ಆಫರ್​ ನೀಡಿದ್ದಾರೆ. ಪ್ರತಿ LPG ಸಿಲಿಂಡರ್‌ ದರ 100 ರೂ. ಇಳಿಕೆಯಾಗಿದೆ ಸದ್ಯ ಎಲ್‌ಪಿಜಿ ಸಿಲಿಂಡರ್ ದರ 905 ರೂಪಾಯಿ ಇದೆ.

ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.

 

ಉಜ್ವಲ ಯೋಜನೆ ಅಡಿಯಲ್ಲಿ ನೀಡುತ್ತಿರುವ ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ 300 ರೂಪಾಯಿ ಸಬ್ಸಿಡಿಯನ್ನು 2024-25ನೇ ಹಣಕಾಸು ವರ್ಷದವರೆಗೆ ವಿಸ್ತರಣೆ ಮಾಡಿದೆ. ಇದರೊಂದಿಗೆ ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಖರೀದಿಸುವವರಿಗೆ ಅನುಕೂಲವಾಗಲಿದೆ.

ದೇಶದ 10 ಕೋಟಿ ಗೃಹಿಣಿಯರು ಸಬ್ಸಿಡಿಯ ಲಾಭ ಪಡೆಯಲಿದ್ದಾರೆ. 2023ರ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರವು ಎಲ್‌ಪಿಜಿ ಸಬ್ಸಿಡಿಯನ್ನು 200 ರೂಪಾಯಿಂದ 300 ರೂಪಾಯಿಗೆ ಏರಿಕೆ ಮಾಡಿತ್ತು. 2023-24ನೇ ಸಾಲಿನ ಹಣಕಾಸು ವರ್ಷದ ಅಂತ್ಯದವರೆಗೆ 300 ರೂ. ಸಬ್ಸಿಡಿ ನೀಡುವುದಾಗಿ ಘೋಷಿಸಿತ್ತು. 2023-24ನೇ ಸಾಲಿನ ಹಣಕಾಸು ವರ್ಷವು ಮಾರ್ಚ್‌ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮತ್ತೊಂದು ಹಣಕಾಸು ಸಾಲಿಗೆ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ ಸಬ್ಸಿಡಿಯನ್ನು ವಿಸ್ತರಣೆ ಮಾಡಿದೆ.

RELATED ARTICLES

Related Articles

TRENDING ARTICLES