Wednesday, May 8, 2024

International Women’s Day 2024: ಇಂದು ಅಂತರರಾಷ್ಟ್ರೀಯ ಮಹಿಳಾ ದಿನ; ಇತಿಹಾಸ ಮಹತ್ವ ಥೀಮ್ ಹೀಗಿದೆ​

ಮಹಿಳೆಯರ ಸಾಧನೆ ಸಮಾಜಕ್ಕೆ ಅವರ ವಿಶೇಷ ಕೊಡುಗೆಗಳನ್ನು ಸ್ಮರಿಸುವ ದಿನವನ್ನು ಮಹಿಳಾ ದಿನವೆಂದು ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷ ಮಾರ್ಚ್ 8 ರಂದು ಒಂದೊಳ್ಳೆ ವಿಶಿಷ್ಟವಾದ ಥೀಮ್​ ಇಟ್ಟುಕೊಂಡು ಮಹಿಳಾ ದಿನವನ್ನು ಸಂಭ್ರದಿಂದ ಆಚರಣೆ ಮಾಡಲಾಗಿದೆ.

ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಗಳಲ್ಲಿನ ಮಹಿಳೆಯರ ಸಾಧನೆ, ಸಮಾಜಕ್ಕೆ ಅವರ ಕೊಡುಗೆಗಳನ್ನು ಸಂಭ್ರಮಿಸುವ ದಿನ.ಈ ದಿನ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ.

ಇತಿಹಾಸ

ವಿಶ್ವಸಂಸ್ಥೆಯು 1975 ರಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲು ಆರಂಭಿಸಿತು. 1977 ರಲ್ಲಿ ಯು ಎನ್‌ ಜನರಲ್ ಅಸೆಂಬ್ಲಿಯು ಮಹಿಳೆಯರ ಹಕ್ಕುಗಳ ಮತ್ತು ಜಾಗತಿಕ ಶಾಂತಿಯನ್ನು ಬೆಂಬಲಿಸಲು ಮಾರ್ಚ್‌ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಣೆ ಮಾಡಿತು.ಅಂದಿನಿಂದ ಪ್ರತಿ ವರ್ಷ ಮಾರ್ಚ್‌ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಣೆ ಮಾಡಲಾಗುತ್ತಿದೆ.

ಪ್ರತಿ ವರ್ಷವು ವಿಶ್ವಸಂಸ್ಥೆಯು ಹೊಸ ಹೊಸ ಥೀಮ್‌ ನೊಂದಿಗೆ ಈ ದಿನವನ್ನು ಆಚರಣೆ ಮಾಡಲಾಗುತ್ತದೆ.

ಅಂತಾರಾಷ್ಟ್ರೀಯ ಮಹಿಳಾ ದಿನದ ಮಹತ್ವ

ಸಮಾಜದಲ್ಲಿ ಮಹಿಳೆಯರಿಗೂ ಸಮಾನ ಸ್ಥಾನಮಾನ ಸಿಗಬೇಕು ಎಂಬುದು ಅಂತಾರಾಷ್ಟ್ರೀಯ ಮಹಿಳಾ ದಿನದ ಮುಖ್ಯ ಉದ್ದೇಶವಾಗಿದೆ.

ಮಹಿಳಾ ಸಬಲೀಕರಣದ ಮಹತ್ವ ಸಾರಲು, ಲಿಂಗ ಪಕ್ಷಪಾತ ಮುಕ್ತ ಸಮಾಜವನ್ನು ನಿರ್ಮಿಸಲು ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಿಂದನೆಯನ್ನು ತಡೆಯಲು ಜಾಗೃತಿ ಮೂಡಿಸಲು ಮತ್ತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸಲು ಮಹಿಳೆಯರ ಹಕ್ಕುಗಳ ಬಗ್ಗೆ ಗಮನ ಸೆಳೆಯಲು ಮತ್ತು ಜನರಿಗೆ ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳು ಮತ್ತು ಅಭಿಯಾನಗಳನ್ನು ಜಗತ್ತಿನಾದ್ಯಂತ  ಮಹಿಳೆಯರ ಮಹತ್ವವನ್ನು ತಿಳಿಸಲು ಮಹಿಳಾ ದಿನವನ್ನು ಆಚರಿಸಲಾಗುತ್ತದೆ.

ಈ ವರ್ಷದ ಥೀಮ್

ಪ್ರಗತಿಯ ವೇಗವರ್ಧನೆಗೆ ಮಹಿಳೆಯ ಹೂಡಿಕೆ. ಈ ಥೀಮ್ ನ ಉದ್ದೇಶ ಮಹಿಳೆಯರಿಗೆ ಉಪಯೋಗವಾಗುವಂತಹ ಆರೋಗ್ಯ, ಶಿಕ್ಷಣ, ಉದ್ಯೋಗ ಅನೇಕ ಯೋಜನೆಗಳನ್ನು ರೂಪಿಸಿ ಹಣ ಹೂಡಿಕೆ ಮಾಡುವುದಾಗಿದೆ. ಇದರಿಂದ ಮಹಿಳೆಯರಿಗೆ ಮುಂದಿನ ದಿನಗಳಲ್ಲಿ ಸಾಕಷ್ಟು ಉಪಯೋಗವಾಗಬಹು, ಜೊತೆಗೆ ಮಹಿಳೆಯ ಬೆಳವಣಿಗೆ ಅಭಿವೃದ್ಧಿಯಾಗುವುದಲ್ಲದೆ, ದೇಶದ ಪ್ರಗತಿ ಕೂಡ ಹೆಚ್ಚು ಅಭಿವೃದ್ಧಿಯನ್ನು ಕಾಣಬಹುದು ಎಂಬುವುದು ಇದರ ಅರ್ಥವಾಗಿದೆ. ಅಂತೆಯೇ 2024 ಮಹಿಳಾ ದಿನಾಚರಣೆಯ ಘೋಷಣೆ ‘Inspire Inclusion ‘ ಎಂಬುದು ಘೋಷ ವಾಕ್ಯವಾಗಿದೆ.

RELATED ARTICLES

Related Articles

TRENDING ARTICLES