Sunday, May 19, 2024

ಡಿಎಂಕೆ ಗೆ ಬೆಂಬಲ ಸೂಚಿಸಿದ ನಟ ಕಮಲ್ ಹಾಸನ್​!

ಚನ್ನೈ: ಲೋಕಸಭಾ ಚುನಾವಣೆ ಘೋಷಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ, ಬಹುಭಾಷಾ ನಟ ಕಮಲ್ ಹಾಸನ್ ಅವರು ಇಂದು ಅಧಿಕೃತವಾಗಿ ತಮಿಳುನಾಡು ಆಡಳಿತ ಪಕ್ಷ ಡಿಎಂಕೆ ಕೆ ಬೆಂಬಲ ಸೂಚಿಸಿದ್ದಾರೆ.

ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಪಕ್ಷವು ಇಂದು (ಶನಿವಾರ) ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟಕ್ಕೆ (ಎಸ್‌ಪಿಎ) ಸೇರ್ಪಡೆಯಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಲೋಕಸಭಾ ಎಲೆಕ್ಷನ್ ನಲ್ಲಿ ಗೆಲ್ತಾರಾ ದೊಡ್ಮನೆ ಸೊಸೆ, ಈಡೇರುತ್ತಾ ಶಿವಣ್ಣನ ಆಸೆ..?

ಮೈತ್ರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಹಾಸನ್, ‘ದೇಶದ ಹಿತದೃಷ್ಟಿಯಿಂದ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದ್ದೇನೆಯೇ ಹೊರತು ಯಾವುದೇ ಹುದ್ದೆಯನ್ನು ಬಯಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಮಿತಿಯು ಶೀಘ್ರದಲ್ಲೇ ಡಿಎಂಕೆ ನಾಯಕರನ್ನು ಭೇಟಿಯಾಗಲಿದೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES