Monday, May 20, 2024

ಲೋಕಸಭಾ ಚುನಾವಣೆ : ಇಂದು 2ನೇ ಪಟ್ಟಿ ಬಿಡುಗಡೆ: ಬಿಎಸ್​ವೈ

ಶಿವಮೊಗ್ಗ: ಲೋಕಸಭೆ ಚುನಾವಣೆ ಸಂಬಂಧ ಇಂದು ಬಿಜೆಪಿ ಪಕ್ಷದ ಅಭ್ಯರ್ಥಿಗಳ 2ನೇ  ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದೇನೆ. ಸಂಜೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಎರಡನೇ ಪಟ್ಟಿಯ ಅಂತಿಮಗೊಳಿಸುವಿಕೆಯು ಇಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದರು.

ಇದನ್ನೂ ಓದಿ: ಅನ್ನ ಚೆಲ್ಲದಂತೆ ಸಿದ್ಧಗಂಗಾ ಮಠದ ಮಕ್ಕಳ ಪಾಠ: ಮಕ್ಕಳ ಕಾರ್ಯಕ್ಕೆ ಶ್ಲಾಘನೆ!

ಜೆಡಿಎಸ್‌ಗೆ ಸೀಟು ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಸೀಟು ಹಂಚಿಕೆ ವಿಚಾರ ಇನ್ನೂ ಚರ್ಚೆಯಲ್ಲಿದೆ. ಇಂದು ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು. ಹಲವು ಹಾಲಿ ಸಂಸದರಿಗೆ ಟಿಕೆಟ್ ಸಿಗದಿರುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

RELATED ARTICLES

Related Articles

TRENDING ARTICLES