Tuesday, May 7, 2024

ಮಾ.12 ಪಂಚಮಸಾಲಿ ಸಮಾಜದಿಂದ ಬೃಹತ್ ಸಮಾವೇಶ!

ಕಲಬುರ್ಗಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಪಂಚಮಸಾಲಿ ಸಮಾಜದ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇದೇ ಮಾರ್ಚ್ 12ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಏರ್ಪಡಿಸಲಾಗಿದೆಯೆಂದು ಪಂಚಮಸಾಲಿ ಸಮಾಜದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಬಾಸ್​ ದರ್ಶನ್​

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿ ಗ್ರಾಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಚನೆಯಾಗಿ 9 ತಿಂಗಳು ಕಳೆದಿವೆ. ಮೀಸಲಾತಿ ವಿಚಾರದಲ್ಲಿ ಸರ್ಕಾರ ಯಾವುದೇ ಸ್ಪಷ್ಟ ನಿಲುವಿಗೆ ಬರುತ್ತಿಲ್ಲ. ಸರ್ಕಾರ ರಚನೆಗೂ ಮೊದಲು ನಮ್ಮ ಸರ್ಕಾರ ಬಂದರೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಮಾರ್ಚ 12ರಂದು ಸಂಜೆ 4 ಗಂಟೆಗೆ ಶರಣು ಬಸವೇಶ್ವರ ಜಾತ್ರೆ ಮೈದಾನದಲ್ಲಿ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. 2ಎ ಮೀಸಲಾತಿ ಕಲ್ಪಿಸಲು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಈವರೆಗೂ ಕಾಂಗ್ರೆಸ್ ಪಕ್ಷದಿಂದ ಉತ್ತಮ ಸ್ಪಂದನೆ ಸಿಕ್ಕಿಲ್ಲ ಎಂದು ಆಕ್ರೋಶ ಹೊರಹಾಕಿದರು‌.

RELATED ARTICLES

Related Articles

TRENDING ARTICLES