Saturday, May 11, 2024

ಇದೇ ಮೊದಲ ಬಾರಿಗೆ ಬಂಗಾಳದಲ್ಲಿ ರಾಮನವಮಿಗೆ ಸಾರ್ವತ್ರಿಕ ರಜೆ

ಪಶ್ಚಿಮ ಬಂಗಾಳ : ರಾಮನವಮಿ ದಿನವನ್ನು ಸಾರ್ವಜನಿಕ ರಜೆ ಎಂದು ಪಶ್ಚಿಮ ಬಂಗಾಳ ಘೋಷಿಸಿದೆ. ಈ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಮನವಮಿಗೆ ಸಾರ್ವತ್ರಿಕ ರಜೆ ಘೊಷಿಸಿದೆ.

ಶನಿವಾರ ಈ ಸಂಬಂಧ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ದುರ್ಗಾ ಪೂಜೆ ಮತ್ತು ಕಾಳಿ ಪೂಜೆ ಬಂಗಾಳದಲ್ಲಿ ಮೊದಲಿಂದಲೂ ಪ್ರಧಾನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆ ಎರಡು ಹಿಂದೂ ಹಬ್ಬಗಳಿಗೆ ಅಲ್ಲಿ ಸಾರ್ವತ್ರಿಕ ರಜೆ ಇದೆ. ರಾಮನವಮಿಗೆ ರಜೆ ಘೋಷಿಸಿದ್ದು ಇದೇ ಮೊದಲು.

ಇದನ್ನೂ ಓದಿ: ಲೋಕಸಭಾ ಚುನಾವಣೆ: TMC 42 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಸಿಎಂ ಮಮತಾ

ಈ ಹಿಂದೆ ರಾಮನವಮಿ ಹಬ್ಬದಂದು ಮೆರವಣಿಗೆ ನಡೆಯುವ ವೇಳೆ ಬಂಗಾಳದ ಕೆಲವೆಡೆ ಹಿಂಸಾಚಾರಗಳಾಗಿ, ಬಂಗಾಳ ಸರ್ಕಾರದ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಅದರ ಬೆನ್ನಲ್ಲೇ ಲೋಕಸಭೆ ಚುನಾವಣೆಗೆ ಮುನ್ನ ಸರ್ಕಾರ ರಾಮನವಮಿಗೆ ರಜೆ ಘೋಷಿಸುವ ನಿರ್ಧಾರ ಮಾಡಿದೆ.

RELATED ARTICLES

Related Articles

TRENDING ARTICLES