Tuesday, May 21, 2024

ಮೋದಿ ಅವರ ಮಾತುಗಳು ಬರೀ ಓಳು : ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳು ಬರೀ ಓಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ನೀಡಿರುವ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಅವರು ಪೋಸ್ಟ್​ ಮಾಡಿದ್ದಾರೆ.

ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ ಎಂದು ಕುಟುಕಿದ್ದಾರೆ.

ಹೆಗಡೆರನ್ನ ಮೊದಲು ಪಕ್ಷದಿಂದ ಕಿತ್ತುಹಾಕಿ

ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಮೋದಿ ಒಪ್ಪದೆ ಇದ್ದರೆ, ಅವರನ್ನು ಮೊದಲು ಪಕ್ಷದಿಂದ ಕಿತ್ತುಹಾಕಬೇಕು. ಅವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಚಾಟಿ ಬೀಸಿದ್ದಾರೆ.

ಮನು ಪ್ರಣೀತ ಸಂವಿಧಾನ ಜಾರಿ ಮಾಡ್ತೀರಾ?

ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತಕುಮಾರ್ ಹೆಗಡೆ ಅವರು ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಬಿಜೆಪಿ ಪಕ್ಷಕ್ಕೆ ಇದೆ ಎಂದು ಆರೋಪ ಮಾಡಿದ್ದಾರೆ.

RELATED ARTICLES

Related Articles

TRENDING ARTICLES