Sunday, May 12, 2024

ವೃದ್ಧ ಮಾವನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಸೊಸೆ

ಮಂಗಳೂರು: ವೃದ್ಧ ಮಾವನಿಗೆ ಸೊಸೆಯೊಬ್ಬಳು ಹಿಗ್ಗಾ-ಮುಗ್ಗಾ ಥಳಿಸಿರುವ ಅಮಾನವೀಯ ಕೃತ್ಯ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ.

ಪದ್ಮನಾಭ ಸುವರ್ಣ(87), ಸೊಸೆಯಿಂದ ಹಲ್ಲೆಗೊಳಗಾದ ಮಾವ. ಆರೋಪಿ ಸೊಸೆಯನ್ನು ಉಮಾಶಂಕರಿ ಎಂದು ಗುರುತಿಸಲಾಗಿದ್ದು, ಈಕೆ ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ ಅಧಿಕಾರಿಯಾಗಿದ್ದಾಳೆ.

ರಾಕ್ಷಸಿ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಟಾಬಯಲು

ಉಮಾಶಂಕರಿ ಪತಿ ವಿದೇಶದಲ್ಲಿ ಉದ್ಯೋಗಲ್ಲಿದ್ದಾರೆ. ಪತಿ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮಾರ್ಚ್ 9 ರಂದು ಮಾವನಿಗೆ ವಾಕ್ ಸ್ಟಿಕ್ ನಲ್ಲಿ ಸೊಸೆ ಮನಬಂದಂತೆ ಥಳಿಸಿದ್ದಾಳೆ.ಯಾವ ಕಾರಣಕ್ಕೆ ಸೊಸೆ ಮಾವನಿಗೆ ಹೊಡೆದಿದ್ದಾಳೆ ಅನ್ನೋ ವಿಚಾರ ತಿಳಿದುಬಂದಿಲ್ಲ.

ಗಾಯಾಳು ಪದ್ಮನಾಭ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ತಂದೆಗೆ ಥಳಿಸಿದ ಉಮಾ ಶಂಕರಿ ವಿರುದ್ಧ ಸಿಸಿಟಿವಿ ದೃಶ್ಯ ಆಧರಿಸಿ ಪದ್ಮನಾಭ ಸುವರ್ಣರ ಮಗಳು ಪ್ರಿಯಾ ಸುವರ್ಣ ದೂರು ನೀಡಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಉಮಾಶಂಕರಿ ವಿರುದ್ಧ ಕೊಲೆಯತ್ನ ದೂರು ದಾಖಲಾಗಿದೆ.

 

RELATED ARTICLES

Related Articles

TRENDING ARTICLES