Sunday, May 19, 2024

ಮೋದಿ ಅನುದಾನ ಕೊಟ್ಟಿಲ್ಲ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಲ್ಲ : ಸಿದ್ದರಾಮಯ್ಯ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವೇತನ ಹೆಚ್ಚಳ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ನಿಮ್ಮ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸುವೆ ಎಂದಷ್ಟೇ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ 11,500 ಹಾಗೂ 10,000 ಹಾಗೂ ಸಹಾಯಕಿಯರಿಗೆ 6,000 ರೂ.ಗಳು ಸದ್ಯ ದೊರೆಯುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲ. ಹೀಗಾಗಿ, ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ ಎಂದು ಹೇಳಿದ್ದಾರೆ.

1,000 ರೂ. ಹೆಚ್ಚಿಸುವ ಬಗ್ಗೆ ತೀರ್ಮಾನ

ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES