Tuesday, September 17, 2024

ಡಿ.ವಿ. ಸದಾನಂದ ಗೌಡರಿಗೆ ಬಿಗ್​ ಶಾಕ್​: ಬಿಜೆಪಿ ಟಿಕೆಟ್​ ಮಿಸ್​

ಬೆಂಗಳೂರು: ಬಿಜೆಪಿ ಹಾಲಿ ಸಂಸದ,ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ಲೋಕಸಭಾ ಟಿಕೆಟ್ ಕೈತಪ್ಪಿದೆ.  

ಹೌದು,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ಮಾಜಿ ಸಿಎಂ ಡಿ.ವಿ.ಸದಾನಂದಗೌಡರಿಗೆ ಈಬಾರಿ ಲೋಕಸಭಾ ಟಿಕೆಟ್ ಮಿಸ್ ಆಗಿದ್ದು,ಈ ಬಗ್ಗೆ ಬಿಜೆಪಿ ಹೈಕಮಾಂಡ್ ಸದಾನಂದಗೌಡರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದೆ.ಈ ಬಾರಿ ಅಭ್ಯರ್ಥಿ ಬದಲಾವಣೆ ಮಾಡುತ್ತಿರುವುದಾಗಿ ಹೈಕಮಾಂಡ್ ತಿಳಿಸಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್​ಗಾಗಿ ಈಬಾರಿಯೂ ಸದಾನಂದಗೌಡ ತೀವ್ರ ಕಸರತ್ತು ನಡೆಸಿದ್ದರು. ಆದರೆ ಕೊನೇಕ್ಷಣದಲ್ಲಿ ಅಭ್ಯರ್ಥಿ ಬದಲಾವಣೆ ಮಾಡುವುದಾಗಿ ಬಿಜೆಪಿ ವರಿಷ್ಠರು ಸಂದೇಶ ರವಾನಿಸುವ ಮೂಲಕ ಹಾಲಿ ಸಂಸದ ಡಿ.ವಿ.ಸದಾನಂದ ಗೌಡನಿಗೆ ಶಾಕ್ ನೀಡಿದ್ದಾರೆ.

 ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡ ಸದಾನಂದ ಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ
ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಬರೆದುಕೊಂಡಿದ್ಧಾರೆ.

RELATED ARTICLES

Related Articles

TRENDING ARTICLES